alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಮ ಪ್ರವಾಹಕ್ಕೆ ಕೊಚ್ಚಿ ಹೋದ ಹತ್ತಕ್ಕೂ ಹೆಚ್ಚು ಭಾರತೀಯ ಯೋಧರು

siachen-glacier-mountains_a380e13e-ca5f-11e5-9f1f-e42e029c5977

ಜಮ್ಮು ಮತ್ತು ಕಾಶ್ಮೀರ ಕಣಿವೆಯ ಸಿಯಾಚಿನ್ ನೀರ್ಗಲ್ಲ ಪ್ರದೇಶದಲ್ಲಿ ಭಾರೀ ಪ್ರಮಾಣದ ಹಿಮ ಪ್ರವಾಹ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಮಂದಿ ಸೇನಾ ಸಿಬ್ಬಂದಿ ಕಣ್ಮರೆಯಾಗಿರುವ ಘಟನೆ ನಡೆದಿದೆ.

ಹೌದು. ಬುಧವಾರ ಸಿಯಾಚಿನ್ ನೀರ್ಗಲ್ಲ ಪ್ರದೇಶದ ಉತ್ತರ ಭಾಗದಲ್ಲಿ ಏಕಾಏಕಿ ಹಿಮಪ್ರವಾಹ ಸಂಭವಿಸಿದ್ದು, ಈ ಸಮಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮದ್ರಾಸ್ ರೆಜಿಮೆಂಟ್ ​ಗೆ ಸೇರಿದ ಹತ್ತಕ್ಕೂ ಹೆಚ್ಚು ಸೇನಾ ಸಿಬ್ಬಂದಿ ಕಣ್ಮರೆಯಾಗಿದ್ದಾರೆ ಎನ್ನಲಾಗಿದೆ.

ಈಗಾಗಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿದ್ದು, ಘಟನೆಯ ಕುರಿತಂತೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಆಘಾತಕಾರಿ ವಿಷಯವೆಂದರೆ ಕಳೆದ ತಿಂಗಳಿನಲ್ಲಿ ಲಡಾಖ್ ಪ್ರದೇಶದಲ್ಲಿ ಇದೇ ರೀತಿಯ ಹಿಮ ಪ್ರವಾಹ ಸಂಭವಿಸಿ ಮೂರು ಮಂದಿ ಸ್ಕೌಟ್​ ಗಳು ಸಾವನ್ನಪ್ಪಿದ್ದರು ಎಂಬುದನ್ನಿಲ್ಲಿ ಸ್ಮರಿಸಬಹುದು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...