alex Certify
ಕನ್ನಡ ದುನಿಯಾ       Mobile App
       

Kannada Duniya

ಮೊದಲ ಬಾರಿಗೆ ಪಾಕಿಸ್ತಾನ ಮಾಡಿದೆ ಒಂದೊಳ್ಳೆ ಕೆಲ್ಸ

army

ಭಾರತದ ಗಡಿಯೊಳಗೆ ಉಗ್ರರು ನುಸುಳಲು ಸಹಕಾರ ನೀಡುತ್ತಿದ್ದ ಹಾಗೂ ಭಾರತದಲ್ಲಿ ವಿಧ್ವಂಸಕ ಕೃತ್ಯ ಎಸಗಿದವರಿಗೆ ತನ್ನ ನೆಲದಲ್ಲಿ ಆಶ್ರಯ ಕೊಡುತ್ತಾ ಬಂದಿದ್ದ ಪಾಕಿಸ್ತಾನ ಇದೇ ಮೊದಲ ಬಾರಿಗೆ ಒಂದು ಒಳ್ಳೆಯ ಕೆಲಸ ಮಾಡಿದೆ.

ಭಾರತದಲ್ಲಿ ಶಿವರಾತ್ರಿ ವೇಳೆ ಬೃಹತ್ ಪ್ರಮಾಣದಲ್ಲಿ ಭಯೋತ್ಪಾದನಾ ಕೃತ್ಯವೆಸಗಲು ಪಾಕಿಸ್ತಾನದ 10 ಮಂದಿ ಉಗ್ರರು ಭಾರತದೊಳಕ್ಕೆ ಪ್ರವೇಶಿಸಿದ್ದಾರೆಂಬ ಮಾಹಿತಿಯನ್ನು ಅಲ್ಲಿನ ರಾಷ್ಟ್ರೀಯ ಭದ್ರತಾ ಸಂಸ್ಥೆ ಇದೇ ಮೊದಲ ಬಾರಿಗೆ ಮಾಹಿತಿ ನೀಡಿದೆಯಲ್ಲದೇ ಇವರುಗಳು ಗುಜರಾತನ್ನು ಗುರಿಯಾಗಿಸಿಕೊಂಡಿರುವ ಸಾಧ್ಯತೆಯಿದೆ ಎಂದು ಹೇಳಿದೆ.

ಈ ಹಿನ್ನಲೆಯಲ್ಲಿ ಗುಜರಾತ್ ಸೇರಿದಂತೆ ದೇಶದ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ. ಧಾರ್ಮಿಕ ಕೇಂದ್ರಗಳು ಹಾಗೂ ಸಾರ್ವಜನಿಕ ಪ್ರದೇಶಗಳಲ್ಲಿ ಈ ಉಗ್ರರು ದಾಳಿ ನಡೆಸಬಹುದೆಂಬ ಸಾಧ್ಯತೆ ಹಿನ್ನಲೆಯಲ್ಲಿ ತೀವ್ರ ನಿಗಾ ವಹಿಸಲಾಗಿದೆ. ಗುಜರಾತ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪಿ.ಸಿ. ಠಾಕೂರ್ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...