alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿಯಲ್ಲಿ ಕಳುವಾಗ್ತಿರೋ ವಾಹನಗಳ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಿ

car+theftರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ನಿತ್ಯ ಕಳುವಾಗುತ್ತಿರುವ ವಾಹನಗಳ ಸಂಖ್ಯೆ ಕೇಳಿದರೆ ಬೆಚ್ಚಿ ಬೀಳುವಂತಿದೆ. ಜನವರಿ 1 ರಿಂದ ಏಪ್ರಿಲ್ 15 ರವರೆಗೆ ಪ್ರತಿ ನಿತ್ಯ 105 ವಾಹನಗಳಂತೆ ಒಟ್ಟು 11,116 ವಾಹನಗಳು ಕಳುವಾಗಿದೆ.

ಕಳುವಾದ ವಾಹನಗಳ ಪೈಕಿ ದ್ವಿಚಕ್ರ ವಾಹನ, ಕಾರು ಸೇರಿದಂತೆ ದೊಡ್ಡ ವಾಹನಗಳೂ ಸೇರಿದ್ದು, ದೆಹಲಿಯಲ್ಲಿ ಬೀಡು ಬಿಟ್ಟಿರುವ 15 ರಿಂದ 20 ಗ್ಯಾಂಗ್ ಗಳು ಈ ಕೃತ್ಯ ಎಸಗುತ್ತಿರಬೇಕೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಕಳುವಾದ ವಾಹನಗಳ ನಂಬರ್ ಪ್ಲೇಟ್ ಬದಲಿಸಿ ಇತರೆ ರಾಜ್ಯಗಳಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿರುವುದಲ್ಲದೇ ಹಳೆಯ ವಾಹನಗಳನ್ನು ಕದ್ದ ವೇಳೆ ಅದರ ಬಿಡಿ ಭಾಗಗಳನ್ನು ಬಿಚ್ಚಿ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ. ವಾಹನ ಕಳವು ಪ್ರಕರಣಗಳನ್ನು ತಡೆಗಟ್ಟಲು ಪೊಲೀಸರು ಹಲವಾರು ಕ್ರಮ ಕೈಗೊಂಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...