alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಕ್ ಉರುಳಿ ಬಿದ್ದು 11 ಮಂದಿ ದಾರುಣ ಸಾವು

ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ತೆರಳುತ್ತಿದ್ದ ಟ್ರಕ್ ಶನಿವಾರ ಮುಂಜಾನೆ ಸಾಂಗ್ಲಿ ಬಳಿ ಉರುಳಿ ಬಿದ್ದ ಪರಿಣಾಮ 11 ಮಂದಿ ಸಾವನ್ನಪ್ಪಿ 10 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ತಾಸ್ಗಾಂವ್-ಕವಾತೆ ಮಹಕಲ್ ಹೆದ್ದಾರಿಯಲ್ಲಿ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಉರುಳಿ ಬಿದ್ದಿದೆ ಎನ್ನಲಾಗಿದೆ.

11 ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟೈಲ್ಸ್ ತುಂಬಿದ್ದ ಟ್ರಕ್ ನಲ್ಲಿ ಪ್ರಯಾಣಿಸುತ್ತಿದ್ದವರು ಕರ್ನಾಟಕದ ವಿಜಯಪುರ ಜಿಲ್ಲೆಯವರೆಂದು ಹೇಳಲಾಗುತ್ತಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...