alex Certify
ಕನ್ನಡ ದುನಿಯಾ       Mobile App
       

Kannada Duniya

‘ದೀದಿಯ ತಲೆ ತಂದುಕೊಟ್ಟವರಿಗೆ 11 ಲಕ್ಷ ಬಹುಮಾನ’

mamata-l

ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾ ಮುಖಂಡನೊಬ್ಬ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಶಿರಚ್ಛೇದ ಮಾಡಿದವರಿಗೆ 11 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದ್ದಾನೆ. ಈ ರೀತಿ ವಿವಾದಾತ್ಮಕ ಹೇಳಿಕೆ ನೀಡಿರುವ ಯೋಗೇಶ್ ವರ್ಶ್ನೆ, ಬಿಜೆಪಿ ಯುವ ಮೋರ್ಚಾದ ಸದಸ್ಯ.

ಹನುಮಾನ್ ಜಯಂತಿ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಪಶ್ಚಿಮ ಬಂಗಾಳದ ಬಿರ್ಭುಮ್ ನಲ್ಲಿ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ಆದ್ರೆ ರ್ಯಾಲಿಗೆ ಅಡ್ಡಿಪಡಿಸಿದ ಪೊಲೀಸರು ಭಕ್ತರನ್ನು ಮನಬಂದಂತೆ ಥಳಿಸಿದ್ದಾರೆ ಅನ್ನೋದು ಯೋಗೇಶ್ ಆರೋಪ. ಅಮಾಯಕರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ, ಪಶ್ಚಿಮ ಬಂಗಾಳ ಸಿಎಂ ಒಬ್ಬ ರಾಕ್ಷಸಿ ಅಂತಾ ಅವರು ಕಿಡಿಕಾರಿದ್ದಾರೆ.

ಪೊಲೀಸರು ನಡೆಸಿದ ಹಲ್ಲೆಯ ವಿಡಿಯೋ ನೋಡಿದಾಕ್ಷಣ ನನ್ನ ಮನಸ್ಸಿನಲ್ಲಿ ಬಂದಿದ್ದು ಒಂದೇ ಯೋಚನೆ, ಮಮತಾ ಬ್ಯಾನರ್ಜಿ ಅವರ ತಲೆ ತಂದುಕೊಡಿ, 11 ಲಕ್ಷ ರೂಪಾಯಿ ಬಹುಮಾನ ಪಡೆಯಿರಿ ಅಂತಾ ಯೋಗೇಶ್ ಹೇಳಿದ್ದಾರೆ. ಬಿಜೆಪಿ ಮುಖಂಡನ ವಿವಾದಾತ್ಮಕ ಹೇಳಿಕೆ ತೃಣಮೂಲ ಕಾಂಗ್ರೆಸ್ ನಾಯಕರನ್ನು ಕೆರಳಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...