alex Certify
ಕನ್ನಡ ದುನಿಯಾ       Mobile App
       

Kannada Duniya

ಸೇತುವೆಯಿಂದ ನದಿಗೆ ಬಿದ್ದ ಬಸ್: 12 ಮಂದಿ ಸಾವು

ಸವಾಯ್ ಮಾದೋಪುರ್: ಸೇತುವೆಯ ಮೇಲಿನಿಂದ ನದಿಗೆ ಬಸ್ ಉರುಳಿ ಬಿದ್ದು 12 ಮಂದಿ ಸಾವನ್ನಪ್ಪಿದ ಘಟನೆ ರಾಜಸ್ತಾನದಲ್ಲಿ ನಡೆದಿದೆ.

ಸವಾಯ್ ಮಾದೋಪುರ್ ಸಮೀಪದ ದುಭಿ ಬಳಿ ಅಪಘಾತ ಸಂಭವಿಸಿದೆ. ಶನಿವಾರ ಬೆಳಿಗ್ಗೆ ಸುಮಾರು 40 ಪ್ರಯಾಣಿಕರು ಇದ್ದ ಬಸ್ ಸೇತುವೆ ಮೇಲೆ ತೆರಳುವಾಗ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ.

ದುರಂತದಲ್ಲಿ 12 ಮಂದಿ ಸಾವು ಕಂಡು, 24 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ಸೇರಿಸಲಾಗಿದೆ. ಹಲವರ ಸ್ಥಿತಿ ಗಂಭೀರವಾಗಿದೆ.

ಘಟನಾ ಸ್ಥಳಕ್ಕೆ ಕೂಡಲೇ ಧಾವಿಸಿದ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಹಲವರನ್ನು ರಕ್ಷಿಸಿದ್ದಾರೆ. ಬಸ್ ನೀರಿನಲ್ಲಿ ಮುಳುಗಿದ್ದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯಾಗಿದೆ. ಇನ್ನೂ ಹಲವರು ಬಸ್ ಒಳಗೆ ಇದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...