alex Certify
ಕನ್ನಡ ದುನಿಯಾ       Mobile App
       

Kannada Duniya

ಬಿರು ಬಿಸಿಲಿಗೆ ತತ್ತರಿಸಿದ ಆಂಧ್ರ- ತೆಲಂಗಾಣ: 12 ಮಂದಿ ಬಲಿ

sun

ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಕೇವಲ ಎರಡು ದಿನಗಳಲ್ಲಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.

ಸೋಮವಾರದಂದು ತೆಲಂಗಾಣದ ಖಮ್ಮಮ್ ಮತ್ತು ನಲಗೊಂಡ ಜಿಲ್ಲೆಯಲ್ಲಿ 9 ಮಂದಿ ಮೃತಪಟ್ಟಿದ್ದರೆ, ಮಂಗಳವಾರದಂದು ಇಬ್ಬರು ಮಹಿಳೆಯರು ಸೇರಿದಂತೆ ಮೂವರು ದಿನಗೂಲಿ ಕಾರ್ಮಿಕರು ತೆಲಂಗಾಣದ ಆದಿಲಾಬಾದ್ ಮತ್ತು ಆಂಧ್ರ ಪ್ರದೇಶದ ಅನಂತಪುರದಲ್ಲಿ ಮೃತಪಟ್ಟಿದ್ದಾರೆ.

ತೆಲಂಗಾಣ ಮತ್ತು ಆಂಧ್ರ ಪ್ರದೇಶದಲ್ಲಿ 37 ರಿಂದ 43 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಮೂರು ದಿನಗಳ ಕಾಲ ಇದೇ ರೀತಿ ಸುಡುವ ಬಿಸಿಲು ಮುಂದುವರೆಯಲಿದೆ. ಆದ್ದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ. ಈ ಬಾರಿಯ ತಾಪಮಾನ ದಶಕದಲ್ಲೇ ಅತಿ ಹೆಚ್ಚಿನದಾಗಿದ್ದು, ಮುಂಗಾರು ಪೂರ್ವ ಮಳೆಯಾಗದ ಪರಿಣಾಮ ಹವಾಮಾನದಲ್ಲಿ ವೈಪರೀತ್ಯವಾಗಿದೆ ಎಂದೂ ಸಹ ಹೇಳಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...