alex Certify
ಕನ್ನಡ ದುನಿಯಾ       Mobile App
       

Kannada Duniya

ಟ್ರಕ್-ಆಟೋ ಡಿಕ್ಕಿ : 12 ಮಂದಿ ಸಾವು

ಜಾರ್ಖಂಡನ ಗುಮ್ಲಾ ಜಿಲ್ಲೆಯ ಭನೋದದಲ್ಲಿ ವೇಗವಾಗಿ ಬರ್ತಿದ್ದ ಟ್ರಕ್ ಆಟೋಕ್ಕೆ ಡಿಕ್ಕಿಯಾಗಿದೆ. ದುರ್ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ -43 ರ ಪಳಮಾಡಿಯಲ್ಲಿ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಮೃತರೆಲ್ಲ ಕಾರ್ಯಕ್ರಮ ಮುಗಿಸಿ ವಾಪಸ್ ಬರುತ್ತಿದ್ದರು ಎನ್ನಲಾಗಿದೆ. ಘಟನೆ ಎಷ್ಟು ಭೀಕರವಾಗಿತ್ತೆಂದ್ರೆ 11 ಜನರು ಸ್ಥಳದಲ್ಲಿಯೇ ನಿಧನರಾಗಿದ್ದಾರೆ. ಮೃತರ ಸಂಬಂಧಿಕರ ದುಃಖ ಮಡುಗಟ್ಟಿದೆ.

ಅಪಘಾತದ ಬಗ್ಗೆ ಮುಖ್ಯಮಂತ್ರಿ ರಘುಬರ್ ದಾಸ್ ವಿಷಾಧ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ನೆರವು ನೀಡುವುದಾಗಿ ಅವರು ಭರವಸೆ ನೀಡಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...