alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್ ! ಶುಲ್ಕ ಕಟ್ಟದ ವಿದ್ಯಾರ್ಥಿಗೆ ಪರೀಕ್ಷೆ ನಿರಾಕರಿಸಿದ ಶಾಲೆ

hyderabad-student

ದೇಶದಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಸಿಗಬೇಕೆಂಬ ಕಾರಣಕ್ಕೆ ಸರ್ಕಾರಗಳು ಹಲವಾರು ಯೋಜನೆಗಳನ್ನು ಪ್ರಕಟಿಸುತ್ತವೆ. ಆದರೆ ಶುಲ್ಕ ಕಟ್ಟಿಲ್ಲವೆಂಬ ಕಾರಣಕ್ಕೆ 6 ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ಶಾಲಾ ಆಡಳಿತ ಮಂಡಳಿ ಅಮಾನವೀಯವಾಗಿ ವರ್ತಿಸಿದೆ.

ಹೈದರಾಬಾದಿನಲ್ಲಿ ಈ ಘಟನೆ ನಡೆದಿದ್ದು, ಅಲ್ಲಿನ ಗೌತಮ್ ಮಾಡೆಲ್ ಸ್ಕೂಲ್ ನಲ್ಲಿ ಓದುತ್ತಿದ್ದ 12 ವರ್ಷದ ಬಾಲಕನನ್ನು ಪರೀಕ್ಷೆ ನಡೆಯುತ್ತಿದ್ದ ವೇಳೆ ಹೊರಗೆ ನಿಲ್ಲಿಸಲಾಗಿದೆ. ತನ್ನ ಸಹಪಾಠಿಗಳು ಪರೀಕ್ಷೆ ಬರೆಯುತ್ತಿರುವುದನ್ನು ಈ ಬಾಲಕ ಅಸಹಾಯಕನಾಗಿ ನೋಡುತ್ತಿದ್ದರೂ ಶಾಲಾ ಆಡಳಿತ ಮಂಡಳಿಯ ಮನ ಕರಗಿಲ್ಲ.

ಬಾಲಕನ ಪೋಷಕರು 30 ಸಾವಿರ ರೂ. ಶಾಲಾ ಶುಲ್ಕದ ಪೈಕಿ ಇನ್ನು 6 ಸಾವಿರ ರೂ. ಪಾವತಿಸಬೇಕಿತ್ತೆನ್ನಲಾಗಿದ್ದು, ಪರೀಕ್ಷೆ ಆರಂಭವಾದರೂ ಹಣ ಕಟ್ಟದ ಕಾರಣ ಆಡಳಿತ ಮಂಡಳಿ ಅಮಾನವೀಯವಾಗಿ ವರ್ತಿಸಿದೆ. ವಿಷಯ ತಿಳಿಯುತ್ತಿದ್ದಂತೆಯೇ ವಿವಿಧ ಸಂಘಟನೆಗಳ ಕಾರ್ಯಕರ್ತರು ಬಾಲಕನ ನೆರವಿಗೆ ಧಾವಿಸಿದ್ದು, ಶಾಲಾ ಆಡಳಿತ ಮಂಡಳಿ ಜೊತೆ ಮಾತನಾಡಿ ಬಾಲಕನಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...