alex Certify
ಕನ್ನಡ ದುನಿಯಾ       Mobile App
       

Kannada Duniya

ಕಂದಕಕ್ಕುರುಳಿದ ಬಸ್ : 13 ಮಂದಿ ದುರ್ಮರಣ

ಉತ್ತರಾಖಂಡದ ತೆಹ್ರಿ ಜಿಲ್ಲೆಯಲ್ಲಿ ಬಸ್ ಕಂದಕಕ್ಕೆ ಉರುಳಿ 13 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 25 ಪ್ರಯಾಣಿಕರಿದ್ದ ಬಸ್ 250 ಮೀಟರ್ ಆಳಕ್ಕೆ ಬಿದ್ದಿದೆ. ಘಟನೆಯಲ್ಲಿ 13 ಮಂದಿ ಸಾವನ್ನಪ್ಪಿದ್ದು, ಒಂಭತ್ತಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ತೆಹ್ರಿ ಜಿಲ್ಲೆಯ ಋಷಿಕೇಶ್-ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿ ಎನ್ ಹೆಚ್-94ನಲ್ಲಿ ನಡೆದಿದೆ. ಉತ್ತರಾಖಂಡದ ಸರ್ಕಾರಿ ಬಸ್ ಕಂದಕಕ್ಕುರುಳಿದೆ. ಸೂರ್ಯದಾರ್ ಎಂಬ ಬಳಿ ಈ ಘಟನೆ ನಡೆದಿದೆ ಎಂದು ಮೂಲಗಳು ಹೇಳಿವೆ. ಭಟವಾಡಿ ಉತ್ತರ ಕಾಶಿಯಿಂದ ಹರಿದ್ವಾರಕ್ಕೆ ಬಸ್ ತೆರಳುತ್ತಿದ್ದರು ಎನ್ನಲಾಗಿದೆ.

ಉತ್ತರಾಖಂಡ ಸರ್ಕಾರ ಘಟನೆ ಬಗ್ಗೆ ವಿಷಾಧ ವ್ಯಕ್ತಪಡಿಸಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಿದೆ. ಅಪಘಾತ ಮ್ಯಾಜಿಸ್ಟ್ರೇಟ್ ತನಿಖೆಗೆ ಸೂಚನೆ ನೀಡಲಾಗಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ದೌಡಾಯಿಸಿದ್ದರು. ರಕ್ಷಣಾ ಕಾರ್ಯ ನಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...