alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 14 ಮಂದಿ ಸಾವು

himachal prad

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ನಡೆದ ಭೀಕರ ಬಸ್ ದುರಂತದಲ್ಲಿ 14 ಮಂದಿ ಸಾವು ಕಂಡಿದ್ದು, ಸುಮಾರು 40 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಕೆಲವರ ಸ್ಥಿತಿ ಚಿಂತಾಜನಕವಾಗಿದೆ.

ಹಿಮಾಚಲ ಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ನಲ್ಲಿ ಸುಮಾರು 50 ಪ್ರಯಾಣಿಕರಿದ್ದರು. ಧರ್ಮಶಾಲಾ ಕಿನ್ನೋರ್ ಜಿಲ್ಲೆಯಿಂದ ಹೊರಟಿದ್ದ ಬಸ್, ಮಾಂಡಿ ಜಿಲ್ಲೆಯ ಜೋಗಿಂದರ್ ನಗರ್ ಎಂಬಲ್ಲಿ ಕಣಿವೆಗೆ ಉರುಳಿ ಬಿದ್ದಿದೆ. ವೇಗವಾಗಿದ್ದ ಬಸ್ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ, ಆಳವಾದ ಕಣಿವೆಗೆ ಬಿದ್ದಿದೆ. ಈ ರಸ್ತೆ ಸಂಪೂರ್ಣ ಹಾಳಾಗಿದ್ದು, ಬಸ್ ನಲ್ಲಿ ಹೆಚ್ಚಿನ ಪ್ರಯಾಣಿಕರಿದ್ದರು. ಎದುರಿನಿಂದ ಬಂದ ವಾಹನಕ್ಕೆ ಸೈಡ್ ಕೊಡಲು ಹೋದಾಗ ಬಸ್ ಉರುಳಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್ ಉರುಳಿ ಬಿದ್ದ ಸಂದರ್ಭದಲ್ಲಿ ಸ್ಥಳದಲ್ಲೇ ಕೆಲವರು ಮೃತಪಟ್ಟರೆ, ಮತ್ತೆ ಕೆಲವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವು ಕಂಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಜರುಗಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...