alex Certify
ಕನ್ನಡ ದುನಿಯಾ       Mobile App
       

Kannada Duniya

ಪಟಾಕಿ ಸ್ಪೋಟಕ್ಕೆ ಬಲಿಯಾದ್ರು 14 ಮಂದಿ

patako

ಭೋಪಾಲ್: ಮಧ್ಯಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ನಡೆದ ಭೀಕರ ದುರಂತದಲ್ಲಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲಾ ಕೇಂದ್ರ ಬಾಲಾಘಾಟ್ ನಿಂದ 5 ಕಿಲೋಮೀಟರ್ ದೂರದಲ್ಲಿ ಪಟಾಕಿ ಕಾರ್ಖಾನೆ ಇದ್ದು, ಸ್ಪೋಟದಿಂದ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಕಾರ್ಖಾನೆಯ ಗೋದಾಮಿನ ಬಳಿ ಕಿಡಿಗೇಡಿಯೊಬ್ಬ ಧೂಮಪಾನ ಮಾಡಿ ಸಿಗರೇಟ್ ಎಸೆದಿದ್ದು, ಅದರಿಂದ ಹೊತ್ತಿದ ಕಿಡಿ ಭಾರೀ ಸ್ಪೋಟಕ್ಕೆ ಕಾರಣವಾಗಿದೆ.

40 ಮಂದಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಅವರಲ್ಲಿ ಕೆಲವರು ಪಾರಾಗಿದ್ದಾರೆ. ಅನೇಕರಿಗೆ ಗಾಯಗಳಾಗಿ, 14 ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ತೆರಳಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...