alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಲಕಿಯನ್ನು ರೇಪ್ ಮಾಡಿ ಬೆಂಕಿ ಹಚ್ಚಿದ ದುರುಳರು

Girl_burnt_aliv1889

ಉತ್ತರ ಪ್ರದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದ್ದು, ತನ್ನ ಮನೆಯಿಂದ ಪಟ್ಟಣಕ್ಕೆ ತೆರಳುತ್ತಿದ್ದ 14 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿದ ಹೇಯ ಘಟನೆಯೊಂದು ನಡೆದಿದೆ.

ಘಾಜಿಪುರ್ ಜಿಲ್ಲೆಯಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದ್ದು, ಏಳನೇ ತರಗತಿಯಲ್ಲಿ ಓದುತ್ತಿರುವ ಇಲ್ಲಿನ ಬಾಲಕಿಯೊಬ್ಬಳು ಸಿವಾನ್‌ ಟೌನ್‌ ಗೆ ತೆರಳುತ್ತಿದ್ದಳು. ಈ ಸಮಯದಲ್ಲಿ ಅಲ್ಲಿಗೆ ಬಂದ ಮೂವರು ಕಾಮುಕರು ಆಕೆಯನ್ನು ಬಲವಂತವಾಗಿ ಕಬ್ಬಿನ ಗದ್ದೆಗೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ನಡೆಸಿ ತದನಂತರ ಆಕೆಯ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಬೆಂಕಿ ತಗುಲುತ್ತಿದ್ದಂತೆ ಬಾಲಕಿ ಕಿರುಚಿಕೊಂಡಿದ್ದು ತಕ್ಷಣ ಅಲ್ಲಿಗೆ ಬಂದ ಸ್ಥಳೀಯರು ಬೆಂಕಿ ನಂದಿಸಲು ಸಫಲರಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದೀಗ ಸುಟ್ಟ ಗಾಯಗಳಿಂದ ಬಾಲಕಿ ಸಾವು- ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಘಟನೆಯ ಕುರಿತಾಗಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕರ ಪತ್ತೆಗೆ ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...