alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಚ್ಚಿ ಬೀಳಿಸುವಂತಿದೆ ಬಾಲಕಿ ಹೇಳಿದ ರಹಸ್ಯ

rape ju 26

ನವದೆಹಲಿ: ನಿರಂತರ ದೌರ್ಜನ್ಯಕ್ಕೆ ಒಳಗಾಗಿದ್ದ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಆಕೆ ಸಾಯುವ ಮೊದಲು ನೀಡಿದ ಹೇಳಿಕೆ ಬೆಚ್ಚಿ ಬೀಳಿಸುವಂತಿದೆ. ನಿರಂತರ ಅತ್ಯಾಚಾರಕ್ಕೆ ಒಳಗಾಗಿದ್ದ ಬಾಲಕಿ 1 ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆಕೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ರಕ್ತವಾಂತಿಯಿಂದ ಬಳಲುತ್ತಿದ್ದ ಬಾಲಕಿ ಸಾಯುವ ಮೊದಲು ತನ್ನ ಮೇಲೆ ನಡೆದ ದೌರ್ಜನ್ಯಗಳ ಕುರಿತಂತೆ ಮಾಹಿತಿ ನೀಡಿದ್ದಾಳೆ. ಶಿವಶಂಕರ್ ಎಂಬಾತ ಆಕೆಯನ್ನು ಎಳೆದೊಯ್ದು, ಕೈ ಕಾಲು ಕಟ್ಟಿಹಾಕಿದ್ದಲ್ಲದೇ, ಬಲವಂತದಿಂದ ಆಸಿಡ್ ಬೆರೆಸಿದ್ದ ಜ್ಯೂಸ್ ಕುಡಿಸಿದ್ದ ಎಂದು ಬಾಲಕಿ ಹೇಳಿದ್ದಾಳೆ. ಹೀಗೆ ನಿರಂತರವಾಗಿ ದೌರ್ಜನ್ಯಕ್ಕೆ ಒಳಗಾದ ಬಾಲಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದು, ಆರೋಪಿ ಶಿವಶಂಕರ್ ಎಂಬುವವನ ಬಗ್ಗೆ ಬಾಯ್ಬಿಟ್ಟಿದ್ದಾಳೆ.

ಸಂತ್ರಸ್ಥ ಬಾಲಕಿಯ ಸಹೋದರನಿಗೆ ಆರೋಪಿ ಶಿವಶಂಕರ್ ಬೆದರಿಕೆ ಹಾಕಿದ್ದು, ಇದರಿಂದ ಆತ ಮನೆಯಿಂದ ಹೊರಗೆ ಹೋಗಲು ಭಯಪಡುವಂತಾಗಿದೆ. ತಮ್ಮ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಬಾಲಕಿಯ ತಾಯಿ ಪೊಲೀಸರಿಗೆ ಮನವಿ ಮಾಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...