alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 15 ಶಾಲಾ ಮಕ್ಕಳ ಸಾವು

up-bs

ಲಖ್ನೋ: ಶಾಲಾ ಬಸ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ, 15 ಕ್ಕೂ ಅಧಿಕ ಮಕ್ಕಳು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಇಟುವಾ ಜಿಲ್ಲೆಯಲ್ಲಿ ನಡೆದಿದೆ.

ಅಲಿಗಂಜ್ ಪ್ರದೇಶದಲ್ಲಿ ಸ್ಕೂಲ್ ಬಸ್ ನಲ್ಲಿ ಮಕ್ಕಳು ಶಾಲೆಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

15 ಮಕ್ಕಳು ಸಾವನ್ನಪ್ಪಿದ್ದು, 30 ಕ್ಕೂ ಅಧಿಕ ಮಕ್ಕಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಗಿದೆ.

ಅಪಘಾತಕ್ಕೀಡಾದ ಬಸ್ ನಲ್ಲಿ ಸುಮಾರು 50 ಮಕ್ಕಳಿದ್ದರು. ಮರಳು ಸಾಗಿಸುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ.

ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗಬಹುದೆಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...