alex Certify
ಕನ್ನಡ ದುನಿಯಾ       Mobile App
       

Kannada Duniya

ಆಂಧ್ರದ ಚಿತ್ತೂರು ಜಿಲ್ಲೆಯಲ್ಲಿ ಭೀಕರ ಅಪಘಾತ

accಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಅಂಗಡಿಗಳಿಗೆ ನುಗ್ಗಿದ ಪರಿಣಾಮ 15 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಮಧ್ಯಾಹ್ನ ತಿರುಪತಿಯಿಂದ 25 ಕಿ.ಮೀ. ದೂರದಲ್ಲಿರುವ ಯರ್ರಪಾಡುವಿನ ಕಾಳಹಸ್ತಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿದ ಲಾರಿ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಕಂಬ ಉರುಳಿ ಬಿದ್ದ ಕಾರಣ ಕೆಲವರು ಶಾಕ್ ತಗುಲಿ ಸಾವನ್ನಪ್ಪಿದರೆ ಮತ್ತೆ ಹಲವರು ಲಾರಿಗೆ ಸಿಲುಕಿ ಸಾವು ಕಂಡಿದ್ದಾರೆ.

ಗಾಯಾಳುಗಳನ್ನು ತಿರುಪತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಲಾರಿ, ಅಂಗಡಿಗಳ ಮೇಲೆ ನುಗ್ಗಿದ ವೇಳೆ ಅದರಡಿ ಸಿಲುಕಿದವರನ್ನು ರಕ್ಷಿಸಲು ಧಾವಿಸಿದವರೂ ವಿದ್ಯುತ್ ಶಾಕ್ ಗೆ ಒಳಗಾಗಿ ಸಾವನ್ನಪ್ಪಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...