alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದ 15 ಮಂದಿ ಬಲಿ

ಮಧ್ಯಪ್ರದೇಶದಲ್ಲೊಂದು ದಾರುಣ ಘಟನೆ ನಡೆದಿದೆ. ಸಂಬಂಧಿಕರೊಬ್ಬರ ಅಂತ್ಯ ಸಂಸ್ಕಾರಕ್ಕೆ ಜೀಪಿನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ 15 ಮಂದಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಮಧ್ಯ ಪ್ರದೇಶದ ರಾಜಧಾನಿ ಭೂಪಾಲ್ ನಿಂದ 456 ಕಿಮೀ ದೂರದಲ್ಲಿರುವ ಮೊರೆನಾದಲ್ಲಿ ಇಂದು ಬೆಳಗಿನ ಜಾವ 5-30 ರ ಸುಮಾರಿಗೆ ಈ ಘಟನೆ ನಡೆದಿದ್ದು, ಇವರುಗಳು ಸಂಬಂಧಿಯೊಬ್ಬರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಗ್ವಾಲಿಯರ್ ನಿಂದ ಮೊರೆನಾಗೆ ತೆರಳುತ್ತಿದ್ದರೆಂದು ಹೇಳಲಾಗಿದೆ.

ಮರಳು ತುಂಬಿಕೊಂಡು ಬರುತ್ತಿದ್ದ ಟ್ರ್ಯಾಕ್ಟರ್ ಜೀಪ್ ಗೆ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ತೀವ್ರತೆಗೆ  ಜೀಪ್ ನಜ್ಜುಗುಜ್ಜಾಗಿದೆ. ಹತ್ತು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐದು ಮಂದಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...