alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಗೆಲುವಿಗೆ ಪಟಾಕಿ ಸಿಡಿಸಿದವರು ಅರೆಸ್ಟ್

mp-arsetf

ಭೋಪಾಲ್: ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನ ಗೆದ್ದ ಸಂದರ್ಭದಲ್ಲಿ ದೇಶದ ಅನೇಕ ಕಡೆ ಸಂಭ್ರಮಾಚರಣೆ ನಡೆಸಿದ್ದಾರೆ.

ಪಾಕ್ ಗೆಲುವಿಗೆ ಸಂಭ್ರಮಾಚರಣೆ ನಡೆಸಿದ್ದ ಅನೇಕರ ವಿರುದ್ಧ ಪ್ರಕರಣ ದಾಖಲಾಗಿದೆ. ಮಧ್ಯಪ್ರದೇಶದ ಬುರ್ಹಾನ್ ಪುರದಲ್ಲಿ ಫೈನಲ್ ನಲ್ಲಿ ಪಾಕ್ ಗೆದ್ದಾಗ 15 ಮಂದಿ ಕಿಡಿಗೇಡಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದಾರೆ.

ಇಂಡಿಯಾ ವಿರುದ್ಧ ಗೆದ್ದ ಪಾಕ್ ಪರ, ಪಾಕ್ ಆಟಗಾರರ ಪರ ಘೋಷಣೆ ಕೂಗಿ ಪಟಾಕಿ ಸಿಡಿಸಿದ್ದಾರೆ ಎನ್ನಲಾಗಿದೆ.

ಶಹಾಪೂರ ಠಾಣೆ ಪೊಲೀಸರು ದೇಶದ್ರೋಹ ಆರೋಪದಡಿ ಪ್ರಕರಣ ದಾಖಲಿಸಿಕೊಂಡು 15 ಮಂದಿಯನ್ನು ಬಂಧಿಸಿದ್ದಾರೆ.

ಭಾನುವಾರ ರಾತ್ರಿ ಪಾಕಿಸ್ತಾನ ಗೆಲುವಿಗೆ ಸಂಭ್ರಮಾಚರಣೆ ನಡೆಸಿದವರನ್ನು ಬಂಧಿಸಲಾಗಿದೆ ಎಂದು ಸ್ಟೇಷನ್ ಇನ್ ಚಾರ್ಜ್ ಸಂಜಯ್ ಪಾಠಕ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...