alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಬಸ್ ಅಪಘಾತದಲ್ಲಿ 17 ಮಂದಿ ಸಾವು

ಅತಿ ವೇಗವಾಗಿ ಹೋಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತದಲ್ಲಿ 17 ಮಂದಿ ಸಾವನ್ನಪ್ಪಿ 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮಯನ್ಪುರಿ ಜಿಲ್ಲೆಯಲ್ಲಿ ನಡೆದಿದೆ.

ತೀವ್ರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಅಪಘಾತದಲ್ಲಿ ಗಾಯಗೊಂಡಿರುವ ಬಸ್ ಚಾಲಕ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆಂದು ತಿಳಿದುಬಂದಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಬಸ್ ಅತಿ ವೇಗದಲ್ಲಿ ಸಾಗುತ್ತಿದ್ದು, ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ವೇಳೆ ಉರುಳಿ ಬಿದ್ದಿದ್ದೇ ಸಾವಿನ ಸಂಖ್ಯೆ ಹೆಚ್ಚಾಗಲು ಕಾರಣವೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...