alex Certify
ಕನ್ನಡ ದುನಿಯಾ       Mobile App
       

Kannada Duniya

1500 ರೂ. ನೀಡದ ಅಪ್ರಾಪ್ತೆಗೆ ಇಂಥ ಶಿಕ್ಷೆ

ಉತ್ತರ ಪ್ರದೇಶದ ಘಾಜಿಯಾಬಾದ್ ನಲ್ಲಿ 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿದೆ. 1500 ರೂಪಾಯಿ ಸಾಲ ತೀರಿಸದ ಕಾರಣ ಇಬ್ಬರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಕೋರ್ಟ್ ಮುಂದೆ ಹಾಜರುಪಡಿಸಿದ್ದರು.

ಆರೋಪಿಗಳನ್ನು ಕೋರ್ಟ್ 14 ದಿನಗಳ ನ್ಯಾಯಾಂಗ ಕಸ್ಟಡಿಗೆ ನೀಡಿದೆ. ಆರೋಪಿಗಳು ಮಾಧ್ಯಮದ ಮುಂದೆ ತಪ್ಪೊಪ್ಪಿಕೊಂಡಿದ್ದಾರೆ. ಘಟನೆ ಬುಧವಾರ ನಡೆದಿದೆ. ಅಂಗಡಿಯಿಂದ ಮನೆಗೆ ಬರ್ತಿದ್ದ ಅಪ್ರಾಪ್ತೆಯನ್ನು ಅಪಹರಿಸಿದ ದುಷ್ಟರು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.

ಅಪ್ರಾಪ್ತೆ ಕುಟುಂಬಸ್ಥರ ದೂರಿನ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದರು. ಇನ್ನೊಬ್ಬ ಅಪ್ರಾಪ್ತ ರಸ್ತೆ ಬದಿಯಲ್ಲಿ ಕುಳಿತಿದ್ದ. ಆತ ಅತ್ಯಾಚಾರವೆಸಗಿರಲಿಲ್ಲವೆಂದು ಪೊಲೀಸರು ಹೇಳಿದ್ದಾರೆ. ಅಪ್ರಾಪ್ತೆ ಹಬ್ಬದ ಸಂದರ್ಭದಲ್ಲಿ 1500 ರೂಪಾಯಿ ಸಾಲ ಪಡೆದಿದ್ದಳು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...