alex Certify
ಕನ್ನಡ ದುನಿಯಾ       Mobile App
       

Kannada Duniya

48 ಗಂಟೆಗಳಲ್ಲಿ ನಡೆದಿದೆ 18 ಎನ್ ಕೌಂಟರ್…!

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಸರ್ಕಾರ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಸಂಕಲ್ಪ ತೊಟ್ಟಿದ್ದು, ಅಪರಾಧಿಗಳನ್ನು ಹೆಡೆಮುರಿ ಕಟ್ಟುವಂತೆ ಪೊಲೀಸರಿಗೆ ಆದೇಶಿಸಿದೆಯಲ್ಲದೇ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗಿದೆ.

ಕಳೆದ 48 ಗಂಟೆಗಳಲ್ಲಿ ಆರೋಪಿಗಳ ಬಂಧನಕ್ಕಾಗಿ ಉತ್ತರ ಪ್ರದೇಶ ಪೊಲೀಸರು 18 ಎನ್ ಕೌಂಟರ್ ಗಳನ್ನು ಮಾಡಿದ್ದು, ಈ ಕಾರ್ಯಾಚರಣೆಯಲ್ಲಿ ಓರ್ವ ಕುಖ್ಯಾತ ಆರೋಪಿ ಸಾವನ್ನಪ್ಪಿದ್ದಾನೆ. ಉತ್ತರ ಪ್ರದೇಶದಲ್ಲಿನ ಎನ್ ಕೌಂಟರ್ ಗಳ ಕುರಿತು ರಾಷ್ಟ್ರೀಯ ಮಾನವ ಹಕ್ಕು ಆಯೋಗ ಸ್ಪಷ್ಟನೆ ಕೇಳಿರುವುದರ ಮಧ್ಯೆ, ಸ್ವಯಂ ರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆಂದು ಪೊಲೀಸ್ ಮಹಾ ನಿರ್ದೇಶಕರು ಸ್ಪಷ್ಟನೆ ನೀಡಿದ್ದಾರೆ.

ಮುಜಫರ್ ನಗರ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕುಖ್ಯಾತ ಪಾತಕಿ ಇಂದ್ರಪಾಲ್ ಸಾವನ್ನಪ್ಪಿದ್ದು, ಆತನ ವಿರುದ್ದ 33 ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿದ್ದವು. ತಮಗೆ ದೊರೆತ ಸುಳಿವಿನ ಮೇರೆಗೆ ಬಂಧನಕ್ಕೆ ತೆರಳಿದ ವೇಳೆ ಪೊಲೀಸರ ಮೇಲೆಯೇ ಆತ, ಮತ್ತಾತನ ಸಂಗಡಿಗರು ಗುಂಡು ಹಾರಿಸಿದ್ದು, ಪೊಲೀಸರಿಗೂ ಗುಂಡೇಟು ತಗುಲಿದೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 950 ಎನ್ ಕೌಂಟರ್ ಪ್ರಕರಣಗಳು ನಡೆದಿದ್ದು, 200 ಕ್ಕೂ ಅಧಿಕ ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಎನ್ ಕೌಂಟರ್ ನಲ್ಲಿ ಇದುವರೆಗೂ 30 ಮಂದಿ ಸಾವಿಗೀಡಾಗಿದ್ದಾರೆ. ಈ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆಗೆ ಆದೇಶ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...