alex Certify
ಕನ್ನಡ ದುನಿಯಾ       Mobile App
       

Kannada Duniya

ಸಹ ಪ್ರಯಾಣಿಕರ ಸಮ್ಮುಖದಲ್ಲೇ ನಡೆದಿತ್ತು ವಿದ್ಯಾರ್ಥಿನಿಯ ಹತ್ಯೆ

madhya-pradesh-policeಮಧ್ಯ ಪ್ರದೇಶದಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 19 ವರ್ಷದ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಸಹ ಪ್ರಯಾಣಿಕರ ಸಮ್ಮುಖದಲ್ಲೇ ಹಾಡಹಗಲೇ ಭೀಕರವಾಗಿ ಹತ್ಯೆ ಮಾಡಲಾಗಿದೆ.

ರೇವಾ ಜಿಲ್ಲೆಯ ಈ ವಿದ್ಯಾರ್ಥಿನಿ, ತನ್ನ ಕಾಲೇಜು ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಹತ್ತಿದ ಶಿವೇಂದ್ರ ಸಿಂಗ್ ಎಂಬಾತ ಆಕೆಗೆ ಕಿರುಕುಳ ನೀಡಲಾರಂಭಿಸಿದ್ದಾನೆ. ಇದಕ್ಕೆ ಸಹ ಪ್ರಯಾಣಿಕರು ಆಕ್ಷೇಪ ವ್ಯಕ್ತಪಡಿಸಿದ ವೇಳೆ ಮೊದಲೇ ತಯಾರಾಗಿ ಬಂದಿದ್ದ ಆತ, ಪೆಟ್ರೋಲ್ ಅನ್ನು ಸುರಿದು ಇಡೀ ಬಸ್ ಗೆ ಬೆಂಕಿ ಇಡುವುದಾಗಿ ಬೆದರಿಸಿದ್ದಾನೆ.

ಬಳಿಕ ಚಾಲಕನಿಗೂ ಬೆದರಿಕೆ ಒಡ್ಡಿ ಬಸ್ ನಿಲ್ಲಿಸಿದ್ದಲ್ಲದೇ ವಿದ್ಯಾರ್ಥಿನಿಗೆ ಚಾಕುವಿನಿಂದ ಸಹ ಪ್ರಯಾಣಿಕರ ಸಮ್ಮುಖದಲ್ಲೇ ಮನಬಂದಂತೆ ಇರಿದಿದ್ದಾನೆ. ಘಟನೆಯಿಂದ ದಿಗ್ಬ್ರಾಂತರಾದ ಸಹ ಪ್ರಯಾಣಿಕರು, ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಅಷ್ಟರಲ್ಲಾಗಲೇ ಆತ ಪರಾರಿಯಾಗಿದ್ದಾನೆ, ತೀವ್ರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...