alex Certify
ಕನ್ನಡ ದುನಿಯಾ       Mobile App
       

Kannada Duniya

ಜಲ್ಲಿಕಟ್ಟು ಸ್ಪರ್ಧೆ ನೋಡಲು ಬಂದಿದ್ದ ಯುವಕನ ಸಾವು

ಜಲ್ಲಿಕಟ್ಟು ಸ್ಪರ್ಧೆ ವೇಳೆ 19 ವರ್ಷದ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ತಮಿಳು ನಾಡಿನ ಪಲಮೇಡು ಜಿಲ್ಲೆಯಲ್ಲಿ ನಡೆದಿದೆ. ಜಲ್ಲಿಕಟ್ಟು ಸ್ಪರ್ಧೆ ವೀಕ್ಷಣೆಗೆ ಬಂದ ಯುವಕನಿಗೆ ಗೂಳಿ ತಿವಿದಿದೆ. ಜಲ್ಲಿಕಟ್ಟು ಸ್ಪರ್ಧೆ ಕೊನೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಸಂಕ್ರಾಂತಿಯ ಮೂರು ದಿನ ಈ ಹಬ್ಬವನ್ನು ಆಚರಿಸಲಾಗುತ್ತದೆ. ಜಲ್ಲಿಕಟ್ಟುವಿನ ಕೊನೆಯ ದಿನವಾದ ಇಂದು ಒಂದು ಬಲಿಯಾಗಿದೆ. 1200 ಗೂಳಿಗಳು ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದವು. ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು 1200ಕ್ಕೂ ಹೆಚ್ಚು ಪೊಲೀಸರನ್ನು ನೇಮಿಸಲಾಗಿತ್ತು.

ನಿನ್ನೆ ಮಧುರೈನ ಅವನಿಪುರಂನಲ್ಲಿ ಗೂಳಿ ದಾಳಿಗೆ ಪೊಲೀಸ್ ಅಧಿಕಾರಿ ಸೇರಿ 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. 2014ರಲ್ಲಿ ಸುಪ್ರೀಂ ಕೋರ್ಟ್ ಜಲ್ಲಿಕಟ್ಟು ಸ್ಪರ್ಧೆಯ ಮೇಲೆ ನಿಷೇಧ ಹೇರಿತ್ತು. ಆದ್ರೆ ಹಿಂದಿನ ವರ್ಷ ರಾಜ್ಯ ಸರ್ಕಾರ ಜಲ್ಲಿಕಟ್ಟು ನಿಷೇಧ ತೆರವುಗೊಳಿಸಿ ಸುಗ್ರೀವಾಜ್ಞೆ ಹೊರಡಿಸಿತ್ತು. ಇದಕ್ಕೆ ಕೇಂದ್ರ ಸರ್ಕಾರ ಅಸ್ತು ಎಂದಿತ್ತು. ಮೂರು ವರ್ಷಗಳ ನಿಷೇದದ ನಂತ್ರ ಮತ್ತೆ ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಶುರುವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...