alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ಹತ್ಯೆಗೆ ಸ್ಕೆಚ್ ಹಾಕಿದ್ದ ಸರಣಿ ಸ್ಫೋಟದ ಅಪರಾಧಿ ಅರೆಸ್ಟ್

1998ರ ಸರಣಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿ ಮೊಹಮ್ಮದ್ ರಫೀಕ್ ನನ್ನು ಕೊಯಂಬತ್ತೂರು ಪೊಲೀಸರು ಬಂಧಿಸಿದ್ದಾರೆ. ಈತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿರುವುದಾಗಿ ಹೇಳಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಅದರ ಬೆನ್ನಲ್ಲೇ ಅಲರ್ಟ್ ಆದ ಪೊಲೀಸರು ರಫೀಕ್ ನನ್ನು ಅರೆಸ್ಟ್ ಮಾಡಿದ್ದಾರೆ. ಸರಣಿ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿ ಜೈಲು ವಾಸ ಮುಗಿಸಿ ಬಿಡುಗಡೆಯಾಗಿದ್ದ ವ್ಯಕ್ತಿಯೊಂದಿಗೆ ರಫೀಕ್ ಮಾತನಾಡಿದ್ದ. ಸುಮಾರು 8 ನಿಮಿಷಗಳ ಈ ಸಂಭಾಷಣೆ ಇಂಟರ್ನೆಟ್ ನಲ್ಲಿ ಹರಿದಾಡಿತ್ತು.

ನಾವು ಪ್ರಧಾನಿ ಮೋದಿಯನ್ನೇ ಮುಗಿಸಲು ಪ್ಲಾನ್ ಮಾಡಿದ್ದೇವೆ. ಈ ಹಿಂದೆ 1998ರಲ್ಲಿ ಉಪ ಪ್ರಧಾನಿಯಾಗಿದ್ದ ಎಲ್.ಕೆ.ಅಡ್ವಾಣಿ ನಗರಕ್ಕೆ ಭೇಟಿ ನೀಡಿದ್ದಾಗಲೂ ನಾವೇ ಬಾಂಬ್ ಇಟ್ಟಿದ್ದೆವು ಅಂತೆಲ್ಲಾ ರಫೀಕ್ ಮಾತನಾಡಿದ್ದ. 1998ರಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ 58 ಜನರನ್ನು ಹತ್ಯೆ ಮಾಡಲಾಗಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...