alex Certify
ಕನ್ನಡ ದುನಿಯಾ       Mobile App
       

Kannada Duniya

ಅತ್ಯಾಚಾರಿಗಳ ಪರ ನಡೆದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಸಚಿವರ ತಲೆದಂಡ

ಕತುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಮತ್ತು ಉನ್ನಾವ್ ನ ಅಪ್ರಾಪ್ತೆ ಮೇಲೆ ಬಿಜೆಪಿ ಶಾಸಕನಿಂದ ನಡೆದ ಅತ್ಯಾಚಾರ ಪ್ರಕರಣಗಳು ಬಿಜೆಪಿಯನ್ನು ತೀವ್ರ ಮುಜುಗರಕ್ಕೀಡು ಮಾಡಿದ್ದು, ಉನ್ನಾವ್ ಪ್ರಕರಣದಲ್ಲಿ ಹೈಕೋರ್ಟ್ ಸೂಚನೆಯಂತೆ ಬಿಜೆಪಿ ಶಾಸಕನ ಬಂಧನವಾಗಿದೆ.

ಇನ್ನು ಕತುವಾದಲ್ಲಿ ನಡೆದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಅಂತರಾಷ್ಟ್ರೀಯ ಮಾಧ್ಯಮಗಳಲ್ಲೂ ವರದಿಯಾಗಿದ್ದು, ದೇಶದಲ್ಲಿಯೂ ಅತ್ಯಾಚಾರ ಆರೋಪಿಗಳ ವಿರುದ್ದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಮಧ್ಯೆ ಪ್ರಕರಣದಲ್ಲಿ ಸಿಲುಕಿದ್ದ ಆರೋಪಿಗಳ ಪರ ಹಿಂದೂ ಏಕ್ತಾ ಮಂಚ್ ನಡೆಸಿದ್ದ ರ್ಯಾಲಿಯಲ್ಲಿ ಪಾಲ್ಗೊಂಡಿದ್ದ ಇಬ್ಬರು ಬಿಜೆಪಿ ಸಚಿವರ ತಲೆದಂಡವಾಗಿದ್ದು, ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಸೂಚನೆಯಂತೆ ಚಂದ್ರ ಪ್ರಕಾಶ್ ಗಂಗಾ ಹಾಗೂ ಲಾಲ್ ಸಿಂಗ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...