alex Certify
ಕನ್ನಡ ದುನಿಯಾ       Mobile App
       

Kannada Duniya

‘ಭಾರತ್ ಮಾತಾಕೀ ಜೈ’ ಎಂದ ಮಕ್ಕಳಿಗೆ ಈ ಶಿಕ್ಷೆ

ಮಧ್ಯಪ್ರದೇಶದ ಶಾಲೆಯೊಂದರಲ್ಲಿ ಭಾರತ್ ಮಾತಾಕೀ ಜೈ ಎಂದಿದ್ದಕ್ಕೆ 20 ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರ ಹಾಕಲಾಗಿದೆ. ಶಾಲೆ ಆಡಳಿತ ಮಂಡಳಿ 20 ವಿದ್ಯಾರ್ಥಿಗಳಿಗೆ ಪೂರ್ವಭಾವಿ ಪರೀಕ್ಷೆ ಬರೆಯಲು ಬಿಡಲಿಲ್ಲ ಎನ್ನಲಾಗಿದೆ.

ಘಟನೆ ನಂತ್ರ ಶಾಲಾ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪಾಲಕರು, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ನಾಮಲಿ ಪಟ್ಟಣದ ಕಾನ್ವೆಂಟ್ ಶಾಲೆಯಲ್ಲಿ ಘಟನೆ ನಡೆದಿದೆ. 9ನೇ ತರಗತಿ ವಿದ್ಯಾರ್ಥಿಗಳು ಭಾರತ್ ಮಾತಾಕೀ ಜೈ ಎಂದಿದ್ದಕ್ಕೆ ಶಾಲೆ ಆಡಳಿತ ಮಂಡಳಿ ಈ ಶಿಕ್ಷೆ ನೀಡಿದೆ. ಮಕ್ಕಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡ ಪಾಲಕರು ಕೋಪ ಶಮನ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ಅದು ಅಲ್ಪಸಂಖ್ಯಾತರ ಸ್ಕೂಲ್ ಆಗಿರುವುದ್ರಿಂದ ಯಾವುದೇ ನಿಯಮಗಳನ್ನು ಪಾಲನೆ ಮಾಡಲಾಗ್ತಿಲ್ಲ. ಮಕ್ಕಳಿಗೆ ಸರಿಯಾಗಿ ವಿದ್ಯೆ ಕಲಿಸುತ್ತಿಲ್ಲ ಎಂಬ ಆರೋಪವೂ ಇದೆ.

 

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...