alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲೇಜು ಹಾಸ್ಟೆಲ್ ನಲ್ಲಿತ್ತು 20,000 ಶಸ್ತ್ರಾಸ್ತ್ರ..!

weapon-generic

ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಎಸ್ಪಿ ಕಾಲೇಜಿನ ಹುಡುಗರ ಹಾಸ್ಟೆಲ್ ನಲ್ಲಿದ್ದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಇವೆಲ್ಲವೂ ಬುಡಕಟ್ಟು ಜನಾಂಗದವರು ಉಪಯೋಗಿಸುವಂತಹ ಸಾಂಪ್ರದಾಯಿಕ ಶಸ್ತ್ರಾಸ್ತ್ರಗಳು. 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಮಾರು 20,000 ಬಿಲ್ಲು, ಬಾಣಗಳು, ಕಬ್ಬಿಣದ ಅಕ್ಷಗಳು, ಬಾಂಬ್ ಸೇರಿದಂತೆ ಹಲವು ಬಗೆಯ ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ರಾಜ್ಯ ಬುಡಕಟ್ಟು ಕಲ್ಯಾಣ ಇಲಾಖೆ ನಡೆಸುತ್ತಿರುವ ಹಾಸ್ಟೆಲ್ ಇದು. ಇಲ್ಲಿ ಇರುವವರೆಲ್ಲ ಸಿಧೋ-ಕನ್ಹು ವಿವಿ ವಿದ್ಯಾರ್ಥಿಗಳು. ನವೆಂಬರ್ 25ರಂದು ನಡೆದ ರಘುವರ್ ದಾಸ್ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಲು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಟ್ಟಿದ್ದರು.

ಜಿಲ್ಲಾ ಪೊಲೀಸರು ಹಾಗೂ ಆರ್ ಎ ಎಫ್ ಯೋಧರು ಜೊತೆಯಾಗಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹಾಸ್ಟೆಲ್ ನಲ್ಲಿದ್ದ 6 ಮಂದಿಯನ್ನು ಬಂಧಿಸಿದ್ದಾರೆ. ಅವರ ವಿಚಾರಣೆ ನಡೆಸುತ್ತಿದ್ದು, ಉಳಿದವರ ವಿವರಗಳನ್ನು ಕೂಡ ಪರಿಶೀಲಿಸಲಾಗುತ್ತಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...