alex Certify
ಕನ್ನಡ ದುನಿಯಾ       Mobile App
       

Kannada Duniya

ಗೋಧ್ರಾ ಹತ್ಯಾಕಾಂಡದ 11 ದೋಷಿಗಳಿಗೆ ಮರಣದಂಡನೆಯಲ್ಲ, ಜೀವಾವಧಿ

ಗೋಧ್ರಾ ಹತ್ಯಾಕಾಂಡಕ್ಕೆ ಸಂಬಂಧಿಸಿದಂತೆ 11 ಅಪರಾಧಿಗಳ ಶಿಕ್ಷೆಯನ್ನು ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿದೆ. ಜೊತೆಗೆ ವಿಶೇಷ ನ್ಯಾಯಾಲಯ 2011 ಮಾರ್ಚ್ 1ರಂದು 11 ದೋಷಿಗಳಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದೆ.

ಅಷ್ಟೇ ಅಲ್ಲ ಹತ್ಯಾಕಾಂಡದಲ್ಲಿ ಜೀವ ತೆತ್ತವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ವಿಶೇಷ ನ್ಯಾಯಾಲಯ 31 ಮಂದಿ ತಪ್ಪಿತಸ್ಥರೆಂದು ತೀರ್ಪು ನೀಡಿತ್ತು.

ಅವರಲ್ಲಿ 11 ಮಂದಿಗೆ ಮರಣದಂಡನೆ, ಇತರ 20 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. 63 ಜನರನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು. ತೀರ್ಪು ಪ್ರಶ್ನಿಸಿ ಗುಜರಾತ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

2002 ಫೆಬ್ರವರಿ 27ರಂದು ನಡೆದ ಪ್ರಕರಣ ಇದು. ಸಾಬರಮತಿ ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ ಹಚ್ಚಿದ್ದರಿಂದ ಅಯೋಧ್ಯೆಯಿಂದ ಮರಳುತ್ತಿದ್ದ 59 ಕರಸೇವಕರು ಸಜೀವ ದಹನವಾಗಿದ್ದರು. ಗೋಧ್ರಾ ರೈಲು ಹತ್ಯಾಕಾಂಡದ ಬಳಿಕ ನಡೆದ ಗುಜರಾತ್ ಗಲಭೆಯಲ್ಲಿ ಸುಮಾರು 1200 ಮಂದಿ ಪ್ರಾಣ ಕಳೆದುಕೊಂಡಿದ್ದರು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...