alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಬಸ್ ಅಪಘಾತದಲ್ಲಿ 33 ಮಂದಿ ದುರ್ಮರಣ

ಪ್ರವಾಸಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರಿದ್ದ ಬಸ್ ಒಂದು ಶನಿವಾರದಂದು ಘಾಟಿಯಲ್ಲಿ ಉರುಳಿ ಬಿದ್ದ ಪರಿಣಾಮ 33 ಮಂದಿ ಸಾವನ್ನಪ್ಪಿದ್ದಾರೆ.

ಮಹಾರಾಷ್ಟ್ರದ ರಾಯಘಡ ಜಿಲ್ಲೆಯಲ್ಲಿರುವ ದಪೋಲಿ ಕೃಷಿ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಬಸ್ ನಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರೆಂದು ಹೇಳಲಾಗಿದೆ.

ರಾಯಘಡ-ಸತಾರಾ ಜಿಲ್ಲೆ ಗಡಿ ಭಾಗದ ಮಹಾಬಲೇಶ್ವರ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ 500 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಬಸ್ ನಲ್ಲಿ 40 ಮಂದಿ ಪ್ರಯಾಣಿಸುತ್ತಿದ್ದರೆಂದು ಹೇಳಲಾಗಿದ್ದು, ಈ ಪೈಕಿ 33 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...