alex Certify
ಕನ್ನಡ ದುನಿಯಾ       Mobile App
       

Kannada Duniya

ಯೋಗಿ ಆದಿತ್ಯನಾಥ್ ರ ಆಕ್ಷೇಪಾರ್ಹ ಚಿತ್ರ ಪ್ರಕಟಿಸಿದ್ದ ಯುವಕ ಅರೆಸ್ಟ್

yogi-adityanath-3445ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರ ಅಕ್ಷೇಪಾರ್ಹ ಚಿತ್ರ ಪೋಸ್ಟ್ ಮಾಡಿದ್ದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಿದ ವೇಳೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕರಿಸಿದ ಕೆಲ ಗಂಟೆಗಳ ಬಳಿಕ ಉತ್ತರ ಪ್ರದೇಶದ ಗಾಜೀಪುರ್ ಜಿಲ್ಲೆಯ ಪ್ರೊಫೆಸರ್ ಕಾಲೋನಿ ನಿವಾಸಿ 25 ವರ್ಷದ ಬಾದ್ ಶಾ ಅಬ್ದುಲ್ ರಜಾಕ್ ಎಂಬಾತ ಫೇಸ್ ಬುಕ್ ನಲ್ಲಿ ನಕಲಿ ಖಾತೆ ತೆರೆದು ಯೋಗಿ ಆದಿತ್ಯನಾಥ್ ರ ಆಕ್ಷೇಪಾರ್ಹ ಚಿತ್ರ ಪೋಸ್ಟ್ ಮಾಡಿದ್ದ. ಇದು ವೈರಲ್ ಆಗುತ್ತಿದ್ದಂತೆಯೇ ಹಿಂದೂ ಯುವ ವಾಹಿನಿಯ ಕಾರ್ಯಕರ್ತರು ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾಗಿದ್ದರು.

ಪರಿಸ್ಥಿತಿ ಉದ್ವಿಗ್ನಗೊಳ್ಳುವುದನ್ನು ಅರಿತ ಪೊಲೀಸರು, ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದವನ ಮೂಲ ಪತ್ತೆ ಹಚ್ಚಿದ್ದು, ಅಂತಿಮವಾಗಿ ಅಬ್ದುಲ್ ರಜಾಕ್ ಬಂಧನವಾಗಿದೆ. ವಿಚಾರಣೆ ವೇಳೆ ಫೋಟೋವನ್ನು ತಾನೇ ಪೋಸ್ಟ್ ಮಾಡಿರುವುದಾಗಿ ಆತ ಒಪ್ಪಿಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...