alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಬೆಂಕಿ ದುರಂತದಲ್ಲಿ 27 ಮಂದಿ ಸಜೀವ ದಹನ

ಬಿಹಾರದ ಮೋತಿಹಾರಿಯಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ 27 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.

ಮುಜಾಫರ್ ಪುರ್ ನಿಂದ ನವದೆಹಲಿಗೆ ಪ್ರಯಾಣಿಸುತ್ತಿದ್ದ ಬಸ್ ನಲ್ಲಿ 32 ಮಂದಿ ಪ್ರಯಾಣಿಕರಿದ್ದರು. ಮೋತಿಹಾರ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ರಸ್ತೆ ಪಕ್ಕಕ್ಕೆ ಬಿದ್ದಿದೆ. ಆಗ ಬೆಂಕಿ ತಗುಲಿದ್ದು, ನೋಡ ನೋಡುತ್ತಿದ್ದಂತೆಯೇ ಇಡೀ ಬಸ್ ಗೆ ವ್ಯಾಪಿಸಿದೆ. ಇದರಿಂದಾಗಿ ಹೊರ ಬರಲು ಸಾಧ್ಯವಾಗದೇ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ.

ಮೋತಿಹಾರಿ ಸಮೀಪದ ಬೆಲ್ವ ಗ್ರಾಮದ ರಾಷ್ಟ್ರೀಯ ಹೆದ್ದಾರಿ 28 ರಲ್ಲಿ ಘಟನೆ ನಡೆದಿದೆ. ನಾಲ್ವರನ್ನು ರಕ್ಷಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಸಚಿವ ದಿನೇಶ್ ಚಂದ್ರ ಯಾದವ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...