alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಗೆ ಬೆಂಕಿ ತಗುಲಿ ಮೂವರ ಸಜೀವ ದಹನ

bus-sun

ಚಂಡೀಗಡ: ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿ ಮೂವರು ಪ್ರಯಾಣಿಕರು ಸಜೀವ ದಹನವಾದ ಘಟನೆ ಪಂಜಾಬ್ ನ ಬಟಿಂಡಾ ರೈಲ್ವೇ ಕ್ರಾಸಿಂಗ್ ಬಳಿ ನಡೆದಿದೆ.

ರೈಯಾ ಟ್ರಾನ್ಸ್ ಪೋರ್ಟ್ ಕಂಪನಿಗೆ ಸೇರಿದ ಬಸ್, ಬಟಿಂಡಾದಿಂದ ಲೂಧಿಯಾನಕ್ಕೆ ಹೊರಟಿದ್ದು, ಬಸ್ ನ ಹಿಂಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಬಸ್ ಗೆ ವ್ಯಾಪಿಸಿದೆ.

ಬಸ್ ನಲ್ಲಿದ್ದ ಮೂವರು ಪ್ರಯಾಣಿಕರು ಹೊರ ಬರಲು ಸಾಧ್ಯವಾಗದೇ ಮೃತಪಟ್ಟಿದ್ದಾರೆ. 23 ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುಗಳಲ್ಲಿ 5 ಮಂದಿ ಗಂಭೀರ ಸ್ಥಿತಿಯಲ್ಲಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಈ ವೇಳೆಗಾಗಲೇ ಬಸ್ ಸುಟ್ಟುಹೋಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...