alex Certify
ಕನ್ನಡ ದುನಿಯಾ       Mobile App
       

Kannada Duniya

ಸೇತುವೆಯಿಂದ ನದಿಗೆ ಬಿದ್ದ ಬಸ್, ಮೂವರ ಸಾವು

ತಲಸ್ಸೇರಿ: ಸೇತುವೆಯಿಂದ ನದಿಗೆ ಬಸ್ ಉರುಳಿ ಬಿದ್ದು, ಮೂವರು ಪ್ರಯಾಣಿಕರು ಮೃತಪಟ್ಟು ಹಲವು ಪ್ರಯಾಣಿಕರು ಗಾಯಗೊಂಡ ಘಟನೆ ಕೇರಳದಲ್ಲಿ ನಡೆದಿದೆ.

ಕಣ್ಣೂರು ಸಮೀಪದ ಪೆರಿಂಗಥೂರ್ ನ ಮಯ್ಯಾಜಿ ನದಿ ಸೇತುವೆ ಮೇಲೆ ಸಾಗುತ್ತಿದ್ದ ಬಸ್, ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದಿದೆ. ಬೆಳಗ್ಗೆ 5.45 ಗಂಟೆಗೆ ಅಪಘಾತ ಸಂಭವಿಸಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಅಗ್ನಿಶಾಮಕ ದಳ ಮತ್ತು ತುರ್ತು ಸೇವೆ ಸಿಬ್ಬಂದಿ ನೀರಿನಲ್ಲಿ ಮುಳುಗಿದ್ದ ಬಸ್ ನಲ್ಲಿದ್ದ ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಬಸ್ ಬೆಂಗಳೂರಿನಿಂದ ತಲಸ್ಸೇರಿಗೆ ತೆರಳುತ್ತಿತ್ತು.  ಮಹಿಳೆ ಸೇರಿ ಮೂವರು ಮೃತಪಟ್ಟಿದ್ದು, ಮೃತರ ಗುರುತು ಪತ್ತೆಯಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...