alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತಿನಲ್ಲಿ ಮಾನಗೇಡಿ ಕೆಲಸ ಮಾಡಿದ ಮಾಡೆಲ್

ಹೈದರಾಬಾದ್: ಮದ್ಯ ಸೇವನೆ ಮಾಡಿ ಅಡ್ಡಾದಿಡ್ಡಿಯಾಗಿ ವಾಹನ ಚಾಲನೆ ಮಾಡಿದ ಮಾಡೆಲ್ ಸೇರಿದಂತೆ, ಮೂವರು ಯುವತಿಯರಿಗೆ ಪೊಲೀಸರು ದಂಡ ವಿಧಿಸಿದ್ದಾರೆ.

ಹೈದರಾಬಾದ್ ನ ಜುಬಿಲಿ ಹಿಲ್ಸ್ ಪ್ರದೇಶದಲ್ಲಿ ಪೊಲೀಸರು, ರಾತ್ರಿ ವಾಹನಗಳ ತಪಾಸಣೆ ನಡೆಸುವ ಸಂದರ್ಭದಲ್ಲಿ ಅತಿವೇಗವಾಗಿ ಬಂದ ಕಾರನ್ನು ನಿಲ್ಲಿಸಿದ್ದಾರೆ. ಅಡ್ಡಾದಿಡ್ಡಿಯಾಗಿ ವಾಹನ ಚಾಲನೆ ಮಾಡಿಕೊಂಡು ಬಂದಿದ್ದ ಯುವತಿ ಹಾಗೂ ಕಾರಿನಲ್ಲಿದ್ದ ಮತ್ತಿಬ್ಬರು ಯುವತಿಯರು ಪೊಲೀಸರೊಂದಿಗೆ ರಂಪಾಟ ನಡೆಸಿದ್ದಾರೆ.

ಮದ್ಯಪಾನ ಮಾಡಿದ್ದ ಮಾಡೆಲ್ ಕಾರಿನಲ್ಲೇ ಕುಳಿತರೆ, ಆಕೆಯ ಜೊತೆಗಿದ್ದ ಯುವತಿಯರಿಬ್ಬರು ಕಾರು ಇಳಿದು ಅಡ್ಡಾದಿಡ್ಡಿಯಾಗಿ ಹೆಜ್ಜೆ ಹಾಕುತ್ತಾ ಅಲ್ಲಿಂದ ಹೊರಟಿದ್ದಾರೆ. ತಡೆಯಲು ಬಂದ ಮಹಿಳಾ ಪೊಲೀಸರೊಂದಿಗೆ ಜಗಳವಾಡಿದ್ದಾರೆ. ಕೊನೆಗೆ ಅವರನ್ನು ವಶಕ್ಕೆ ಪಡೆದ ಪೊಲೀಸರು ದಂಡ ವಿಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...