alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ದಂಪತಿ, ಪುತ್ರಿ ದುರ್ಮರಣ

hyder-acc-3

ಹೈದರಾಬಾದ್: ಹೈದರಾಬಾದ್ ನ ಕುಕ್ಕಟಪಲ್ಲಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನರಸಿಂಹುಲು(45), ಅವರ ಪತ್ನಿ ಲಲಿತಾ(35) ಹಾಗೂ ಪುತ್ರಿ ಶಿರಿಶಾ(15) ಮೃತಪಟ್ಟವರು. ಭಾನುವಾರ ಬೆಳಿಗ್ಗೆ ಬೈಕ್ ನಲ್ಲಿ ಮೂವರು ಬಲ್ಕಂಪೇಟೆಯ ಯಲ್ಲಮ್ಮ ದೇವಾಲಯಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ.

ವಿವೇಕಾನಂದ ನಗರ ರಸ್ತೆಯ ಕ್ರಾಸ್ ನಲ್ಲಿ ಲಾರಿ ಡಿಕ್ಕಿ ಹೊಡೆದು ಇವರ ಮೇಲೆ ಚಲಿಸಿದ್ದು, ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನೆಯ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...