alex Certify
ಕನ್ನಡ ದುನಿಯಾ       Mobile App
       

Kannada Duniya

ಲೈಂಗಿಕ ಕಿರುಕುಳ ಆರೋಪ, ನ್ಯಾಯ ಕೊಡಿಸಿ ಎಂದು ಅಂಗಲಾಚಿದ ಪೋಷಕರು

ದೆಹಲಿಯಲ್ಲಿ ಮತ್ತೊಮ್ಮೆ ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿದೆ. 3 ವರ್ಷದ ಬಾಲಕಿಯ ಮೇಲೆ ಶಿಕ್ಷಕನ ಕಾಮ ಕಣ್ಣು ಬಿದ್ದ ಸುದ್ದಿ ಪೋಷಕರಿಗೆ ತಿಳಿಯುತ್ತಿದ್ದಂತೆ, ಪೊಲೀಸರ ಗಮನಕ್ಕೆ ತಂದಿದ್ದಾರೆ. ಖಾಕಿ ಪಡೆ ಈ ಬಗ್ಗೆ ತಲೆ ಕೆಡಿಸಿಕೊಳ್ಳದಾಗ ತಂದೆ-ತಾಯಿ ಸಾಮಾಜಿಕ ತಾಣದ ಮೊರೆ ಹೋಗಿದ್ದಾರೆ.

ಈ ವಿಡಿಯೋದಲ್ಲಿ ತಂದೆ-ತಾಯಿ ತಮ್ಮ ಮಗಳಿಗೆ ನ್ಯಾಯ ಒದಗಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ ಶಾಲೆಯಲ್ಲಿ ತಮ್ಮ ಮಗಳ ಮೇಲೆ ಲೈಂಗಿಕ ಕಿರುಕುಳ ನಡೆದಿದೆ. ಮಗಳು ಶಾಲೆಯಿಂದ ಮನೆಗೆ ಹಿಂದಿರುಗಿದಾಗ ಅವಳ ಬಟ್ಟೆಯಲ್ಲಿ ರಕ್ತದ ಕಲೆ ಇತ್ತು. ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಖಚಿತ ಪಡಿಸಿದ್ದಾರೆ. ಈ ಬಗ್ಗೆ ಪೊಲೀಸರಲ್ಲಿ ದೂರು ನೀಡಲು ಹೋದ್ರೆ, ಪೊಲೀಸರು ಬೆದರಿಕೆ ಹಾಕಿದ್ದಾರೆ ಎಂದು ದೂರಿದ್ದಾರೆ.

ಅಲ್ಲದೆ ಪೊಲೀಸರು ಈ ಘಟನೆ ಶಾಲೆಯ ಹೊರಗೆ ನಡೆದಿದೆ ಎಂದು ತಿಳಿಸಿ, ಪ್ರಕರಣ ತಿರುಚಲು ಪ್ರಯತ್ನಿಸಿದ್ದಾಗಿ ಆರೋಪಿಸಲಾಗಿದೆ. ಶಾಲಾ ಆಡಳಿತ ಮಂಡಳಿ ಈ ಪ್ರಕರಣವನ್ನು ಮುಚ್ಚಿಡುವ ಪ್ರಯತ್ನ ನಡೆಸಿದೆ. ಇನ್ನು ಪೊಲೀಸರು ಪೋಷಕರ ವಿರುದ್ಧವೇ ಪೋಸ್ಕೊ ಕಾಯ್ದೆಯ ಕೇಸ್ ಹಾಕುವ ಧಮ್ಕಿ ಹಾಕಿದ್ದಾರೆ. ಅಲ್ಲದೆ ಮಗಳು ಹಾಗೂ ತಾಯಿಯ ವಿರುದ್ಧ ಮಹಿಳಾ ಪೇದೆಗಳು ದರ್ಪ ಮೆರೆದಿದ್ದಾರೆ ಎಂದು ದೂರಲಾಗಿದೆ.

ಸೆಪ್ಟಂಬರ್ 9 ರಂದು ಈ ವಿಡಿಯೋ ಸಾಮಾಜಿಕ ತಾಣದಲ್ಲಿ ಅಪ್ ಲೋಡ್ ಮಾಡಿದ್ದು, 1 ಲಕ್ಷ ಜನ ನೋಡಿದ್ದಾರೆ. ಸಾವಿರಾರು ಜನ ಶೇರ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗ್ತಾ ಇದ್ದಂತೆ, ಸಾರ್ವಜನಿಕರು ಶಾಲೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...