alex Certify
ಕನ್ನಡ ದುನಿಯಾ       Mobile App
       

Kannada Duniya

ತೆಲಂಗಾಣದಲ್ಲಿ ಬಸ್ ಪಲ್ಟಿಯಾಗಿ 32 ಸಾವು

ತೆಲಂಗಾಣದ ಜಗತಿಯಾಲ್ ಜಿಲ್ಲೆಯಲ್ಲಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘತ್ರೊದಾದ್ ಬಳಿ ಆರ್.ಟಿ.ಸಿ. ಬಸ್ ಪಲ್ಟಿಯಾಗಿದೆ. ಘಟನೆಯಲ್ಲಿ 32 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬಂದಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ಬಸ್ ಬ್ರೇಕ್ ಫೇಲ್ ಆಗಿ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಘಟನೆ ವೇಳೆ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮ( ಟಿಎಸ್ಆರ್ಟಿಸಿ)ದ ಬಸ್ ನಲ್ಲಿ 62 ಪ್ರಯಾಣಿಕರಿದ್ದರು ಎನ್ನಲಾಗಿದೆ.

ಬಸ್ ಶನಿವಾರಂಪೇಟ್ ನಿಂದ ಜಗತಿಯಾಲ್ ಗೆ ತೆರಳುತ್ತಿತ್ತು. ಬ್ರೇಕ್ ಫೇಲ್ ಆದ ಬಸ್ ನಾಲ್ಕು ಬಾರಿ ಪಲ್ಟಿಯಾಗಿದೆಯಂತೆ. ಘಟನೆಗೆ ವಿಷಾದ ವ್ಯಕ್ತಪಡಿಸಿರುವ ಸಿಎಂ ಕೆ. ಚಂದ್ರಶೇಖರ್ ರಾವ್ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. ಗಾಯಾಳುಗಳಿಗೆ ಎಲ್ಲ ಸೌಲಭ್ಯ ನೀಡುವಂತೆ ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...