alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಚ್ಚಿ ಬೀಳಿಸುತ್ತೆ ಭಾರತದ ಜನಪ್ರತಿನಿಧಿಗಳ ಕುರಿತ ಈ ಮಾಹಿತಿ

ಭಾರತದಲ್ಲಿ ಸಾವಿರಾರು ಜನಪ್ರತಿನಿಧಿಗಳು ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಒಟ್ಟು 1765 ಸಂಸದರು ಹಾಗೂ ಶಾಸಕರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳೆಷ್ಟು ಗೊತ್ತಾ? 3,816. ಈ ವಿವರವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ನೀಡಿದೆ.

ಈ ಪೈಕಿ 3045 ಪ್ರಕರಣಗಳ ವಿಚಾರಣೆ ಬಾಕಿ ಇದೆ. ಮಹಾರಾಷ್ಟ್ರ ಮತ್ತು ಗೋವಾ ಹೊರತುಪಡಿಸಿ 23 ಹೈಕೋರ್ಟ್ ಗಳಿಂದ ಈ ವಿವರವನ್ನು ಪಡೆಯಲಾಗಿದೆ. ಅತಿಹೆಚ್ಚು ಕ್ರಿಮಿನಲ್ ಜನಪ್ರತಿನಿಧಿಗಳನ್ನು ಹೊಂದಿರುವ ರಾಜ್ಯ ಉತ್ತರ ಪ್ರದೇಶ.

ಇಲ್ಲಿ 248 ಸಂಸದರು ಮತ್ತು ಶಾಸಕರ ವಿರುದ್ಧ ಒಟ್ಟು 565 ಅಪರಾಧ ಪ್ರಕರಣಗಳು ದಾಖಲಾಗಿವೆ. ನಂತರದ ಸ್ಥಾನ ಕೇರಳದ್ದು, ಇಲ್ಲಿ 114 ಜನಪ್ರತಿನಿಧಿಗಳು 539 ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದಾರೆ. ಮೂರನೇ ಸ್ಥಾನದಲ್ಲಿರೋ ತಮಿಳುನಾಡಿನಲ್ಲಿ 178 ಜನಪ್ರತಿನಿಧಿಗಳ ವಿರುದ್ಧ 402 ಪ್ರಕರಣಗಳು ದಾಖಲಾಗಿವೆ.

ವಿಶೇಷ ಅಂದ್ರೆ ಮಣಿಪುರ ಹಾಗೂ ಮಿಜೋರಾಂನಲ್ಲಿ ಯಾವುದೇ ಶಾಸಕ ಅಥವಾ ಸಂಸದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಿಲ್ಲ.  ಬಿಜೆಪಿ ಮುಖಂಡ ಹಾಗೂ ವಕೀಲ ಅಶ್ವಿನ್ ಕುಮಾರ್ ಉಪಾಧ್ಯಾಯ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ವಿವರಗಳನ್ನು ಕೇಳಿತ್ತು.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...