alex Certify
ಕನ್ನಡ ದುನಿಯಾ       Mobile App
       

Kannada Duniya

ವಿಮಾನದಲ್ಲೇ ನಾಲ್ಕು ತಿಂಗಳ ಮಗು ಸಾವು

ಆರೋಗ್ಯ ಸಮಸ್ಯೆಯಿಂದಾಗಿ ನಾಲ್ಕು ತಿಂಗಳ ಗಂಡು ಮಗುವೊಂದು ವಿಮಾನದಲ್ಲಿ ಪ್ರಾಣ ಬಿಟ್ಟಿರುವ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಆಂಧ್ರದ ನೆಲ್ಲೂರಿನಿಂದ ಪಾಟ್ನಾಗೆ ಇಂಡಿಗೋ ವಿಮಾನ ಹೊರಟಿತ್ತು. ವಿಮಾನದಲ್ಲಿ ನಾಲ್ಕು ತಿಂಗಳ ಗಂಡು ಮಗುವಿನೊಂದಿಗೆ ದಂಪತಿ ಪ್ರಯಾಣ ಮಾಡುತ್ತಿದ್ದರು.

ಆದ್ರೆ ಮಾರ್ಗ ಮಧ್ಯೆ ಮಗುವಿನ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಹೈದ್ರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಯ್ತು. ಕೂಡಲೇ ಮಗುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯ್ತು. ಅಷ್ಟರಲ್ಲಿ ಮಗುವಿನ ಸಾವು ಸಂಭವಿಸಿಬಿಟ್ಟಿತ್ತು.

ಆನಂತರದಲ್ಲಿ ಮಗುವಿನ ಕಳೇಬರವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿಮಾನ ನಿಲ್ದಾಣದ ಪೊಲೀಸರು ಸೆಕ್ಷನ್ 174ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...