alex Certify
ಕನ್ನಡ ದುನಿಯಾ       Mobile App
       

Kannada Duniya

4 ವರ್ಷ ಪೂರೈಸಿದ ಕೇಂದ್ರ ಸರ್ಕಾರ: ಜನರಿಗೆ ಧನ್ಯವಾದ ಹೇಳಿದ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರ ನಾಲ್ಕನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಮೇ 26, 2014 ರಂದು ಮೋದಿ ಅಧಿಕಾರ ಸ್ವೀಕರಿಸಿದ್ದರು. ಪ್ರಧಾನಿಯಾಗಿ ನಾಲ್ಕು ವರ್ಷ ಪೂರೈಸಿರುವ ಮೋದಿ ಜನತೆಗೆ ಧನ್ಯವಾದ ಹೇಳಿದ್ದಾರೆ.

ಒಂದಾದ ಮೇಲೆ ಒಂದರಂತೆ ನಾಲ್ಕು ಟ್ವಿಟ್ ಮಾಡಿದ್ದಾರೆ ಮೋದಿ. 2014 ರ ಈ ದಿನ ನಾವೆಲ್ಲ ಸೇರಿ ಭಾರತವನ್ನು ಬದಲಾಯಿಸುವ ಪ್ರಯತ್ನ ಶುರು ಮಾಡಿದ್ದೆವು. ಕಳೆದ ನಾಲ್ಕು ವರ್ಷಗಳಲ್ಲಿ ಅಭಿವೃದ್ದಿ ದೊಡ್ಡ ಚಳುವಳಿಯಾಗಿ ನಡೆದಿದೆ. ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದೇವೆಂಬುದು ಜನರ ಅರಿವಿಗೆ ಬಂದಿದೆ. 125 ಕೋಟಿ ಜನರು ದೇಶವನ್ನು ಉನ್ನತಿಯತ್ತ ಕೊಂಡೊಯ್ಯುತ್ತಿದ್ದಾರೆಂದು ಮೋದಿ ಟ್ವಿಟ್ ಮಾಡಿದ್ದಾರೆ.

ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟ ಜನರಿಗೆ ಧನ್ಯವಾದಗಳು. ನಿಮ್ಮ ಪ್ರೀತಿ, ಬೆಂಬಲವೇ ನಮಗೆ ಪ್ರೇರಣೆ. ನಿಷ್ಠೆಯಿಂದ ನಾವು ಜನ ಸೇವೆ ಮಾಡುತ್ತೇವೆ ಎಂದು ಮೋದಿ ಟ್ವಿಟ್ ಮಾಡಿದ್ದಾರೆ. ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಈ ದಿನವನ್ನು ಬಿಟ್ರೇಯಲ್ ದಿನವನ್ನಾಗಿ ಆಚರಿಸುತ್ತಿವೆ. ವಿರೋಧಿ ಪಕ್ಷದ ನಾಯಕರು ಸರ್ಕಾರದ ನಡೆಯನ್ನು ಖಂಡಿಸಿ ಟ್ವಿಟ್ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...