alex Certify
ಕನ್ನಡ ದುನಿಯಾ       Mobile App
       

Kannada Duniya

ನದಿಗುರುಳಿದ ಬಸ್- 40 ಕ್ಕೂ ಅಧಿಕ ಮಂದಿ ಸಾವು

bus-accidentಖಾಸಗಿ ಬಸ್ ಒಂದು ನದಿಗೆ ಉರುಳಿ ಬಿದ್ದ ಪರಿಣಾಮ 40 ಕ್ಕೂ ಅಧಿಕ ಮಂದಿ ಸಾವಿಗೀಡಾಗಿ ಹಲವರು ಗಾಯಗೊಂಡಿರುವ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ. ಕಡಿದಾದ ರಸ್ತೆಯಲ್ಲಿ ಬಸ್ ಸಾಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಈ ಬಸ್ ನಲ್ಲಿ ಒಟ್ಟು 56 ಮಂದಿ ಪ್ರಯಾಣಿಸುತ್ತಿದ್ದು, ಉತ್ತರಾಕಾಂಡ್ ನ ತಿಯೊನಿಗೆ ಈ ಬಸ್ ತೆರಳುತ್ತಿತ್ತೆಂದು ಹೇಳಲಾಗಿದೆ. ಶಿಮ್ಲಾ ಹಾಗೂ ಸಿರ್ಮೌರ್ ಜಿಲ್ಲೆಯ ಗಡಿ ಭಾಗದಲ್ಲಿ ಚಲಿಸುತ್ತಿದ್ದ ವೇಳೆ ಈ ಬಸ್ ನದಿಗೆ ಉರುಳಿ ಬಿದ್ದಿದೆ.

ಈ ದುರಂತದಲ್ಲಿ 40 ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ. ದುರಂತ ನಡೆದ ಸ್ಥಳಕ್ಕೆ ದೌಡಾಯಿಸಿರುವ ರಕ್ಷಣಾ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...