alex Certify
ಕನ್ನಡ ದುನಿಯಾ       Mobile App
       

Kannada Duniya

48 ಪ್ರವಾಸಿಗರು ಸಾವು, 10 ಮಂದಿ ನಾಪತ್ತೆ

hm-bu-kusit

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಭೂಕುಸಿತವಾಗಿ 48 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. 10 ಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ.

ಮಂಡಿ –ಪಠಾಣ್ ಕೋಟ್ ರಾಷ್ಟ್ರೀಯ ಹೆದ್ದಾರಿಯ ಪದ್ದಾರ್ ಸಮೀಪ ಕೊಟ್ಪುರಿಯಲ್ಲಿ 2 ಬಸ್ ಗಳ ಮೇಲೆ ಮೇಘಸ್ಪೋಟದಿಂದ ಭೂಕುಸಿತವಾಗಿ 48 ಮಂದಿ ಸಾವನ್ನಪ್ಪಿದ್ದಾರೆ.

ಎನ್.ಡಿ.ಆರ್.ಎಫ್.ನಿಂದ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ. ಭಾನುವಾರ ರಾತ್ರಿ ವಾಹನಗಳು ಸಾಗುತ್ತಿದ್ದ ಸಂದರ್ಭದಲ್ಲಿ 250 ಮೀಟರ್ ಗಿಂತ ಹೆಚ್ಚಿನ ಪ್ರದೇಶದಲ್ಲಿ ಭೂಕುಸಿತವಾಗಿದೆ. ಇದರಿಂದಾಗಿ ಹಲವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಹಲವು ವಾಹನಗಳು ಮಣ್ಣಿನಡಿ ಸಿಲುಕಿದ್ದು, ರಕ್ಷಣಾ ಸಿಬ್ಬಂದಿ, ವಿಪತ್ತು ನಿರ್ವಹಣಾ ತಂಡದಿಂದ ಕಾರ್ಯಾಚರಣೆ ನಡೆಸಲಾಗಿದೆ.

ಮೃತದೇಹಗಳನ್ನು ಹೊರಗೆ ತೆಗೆಯಲಾಗಿದೆ. ಇದುವರೆಗೆ 48 ಮಂದಿ ಸಾವನ್ನಪ್ಪಿರುವ ಮಾಹಿತಿ ಸಿಕ್ಕಿದೆ ಎಂದು ಹಿಮಾಚಲ ಪ್ರದೇಶ ವಿಪತ್ತು ನಿರ್ವಹಣೆ ನಿರ್ದೇಶಕ ಡಿ.ಡಿ. ಶರ್ಮಾ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರಸಿಂಗ್, ರಕ್ಷಣಾ ಕಾರ್ಯಾಚರಣೆ ಮುಂದುವರೆಯಲಿದೆ. ಸಾವನ್ನಪ್ಪಿದವರು ಮತ್ತು ಗಾಯಾಳುಗಳಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...