alex Certify
ಕನ್ನಡ ದುನಿಯಾ       Mobile App
       

Kannada Duniya

ಬಡವರಿಗೆ ಉಚಿತ ಚಿಕಿತ್ಸೆ ನೀಡದ ಆಸ್ಪತ್ರೆಗಳಿಗೆ ದಂಡ

fortis delhiರಿಯಾಯಿತಿ ದರದಲ್ಲಿ ದೆಹಲಿ ಸರ್ಕಾರದಿಂದ ಭೂಮಿ ಪಡೆದರೂ ನಿಯಮದಂತೆ ಬಡವರಿಗೆ ಉಚಿತ ಚಿಕಿತ್ಸೆ ನೀಡದ ಕಾರಣ ಐದು ಆಸ್ಪತ್ರೆಗಳಿಗೆ ಸರ್ಕಾರ, ಭಾರೀ ದಂಡ ವಿಧಿಸಿದೆ. ಒಟ್ಟು 600 ಕೋಟಿ ರೂ. ದಂಡ ವಿಧಿಸಲಾಗಿದ್ದು, ಜುಲೈ 9 ರೊಳಗೆ ಇದನ್ನು ಪಾವತಿಸುವಂತೆ ಸೂಚಿಸಲಾಗಿದೆ.

1960 ರಿಂದ 1990 ರ ಅವಧಿಯಲ್ಲಿ ಸರ್ಕಾರದಿಂದ ರಿಯಾಯಿತಿ ದರದಲ್ಲಿ ಭೂಮಿ ಪಡೆದು ಹೈಟೆಕ್ ಆಸ್ಪತ್ರೆ ನಿರ್ಮಿಸಿರುವ ಆಡಳಿತ ಮಂಡಳಿಗಳು, ಈ ವೇಳೆ ಬಡವರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಸರ್ಕಾರಕ್ಕೆ ಪತ್ರ ಬರೆದುಕೊಟ್ಟಿದ್ದವು. ಆದರೆ ಉಚಿತ ಚಿಕಿತ್ಸೆ ನೀಡುತ್ತಿಲ್ಲವಾದ ಕಾರಣ ಕಳೆದ ಡಿಸೆಂಬರ್ ನಲ್ಲಿ ಸ್ಪಷ್ಟನೆ ಕೋರಿ ಸರ್ಕಾರ ನೋಟೀಸ್ ನೀಡಿತ್ತು. ಸಮರ್ಪಕ ಉತ್ತರ ನೀಡದ ಹಿನ್ನಲೆಯಲ್ಲಿ ದಂಡ ವಿಧಿಸಲಾಗಿದೆ.

ಸಾಕೇತ್ ನ ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಫೋರ್ಟಿಸ್ ಎಸ್ಕಾರ್ಟ್ ಹಾರ್ಟ್ ಇನ್ಸ್ಟಿಟ್ಯೂಟ್, ಶಾಂತಿ ಮುಕುಂದ್ ಆಸ್ಪತ್ರೆ, ಧರ್ಮಶಿಲಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಪುಷ್ಪಾವತಿ ಸಿಂಘಾನಿಯಾ ರೀಸರ್ಚ್ ಇನ್ಸ್ಟಿಟ್ಯೂಟ್ ಗಳಿಗೆ ಒಟ್ಟು 600 ಕೋಟಿ ರೂ. ದಂಡ ವಿಧಿಸಲಾಗಿದೆ. ಇದೇ ರೀತಿ ಇನ್ನೂ 43 ಆಸ್ಪತ್ರೆಗಳು ರಿಯಾಯಿತಿ ದರದಲ್ಲಿ ಭೂಮಿ ಪಡೆದಿವೆ ಎನ್ನಲಾಗಿದ್ದು, ಇಲ್ಲಿಯೂ ಬಡವರಿಗೆ ಉಚಿತ ಚಿಕಿತ್ಸೆ ನೀಡಲಾಗುತ್ತಿದೆಯಾ ಇಲ್ಲವೇ ಎಂಬುದರ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...