alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ ಐದು ಮಂದಿ ಬಲಿ

ಮಧ್ಯಪ್ರದೇಶದ ರತ್ಲಾಂ ಜಿಲ್ಲೆಯಲ್ಲಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿ 25 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್ ಭಾಗಶಃ ಹಾಗೂ ಟ್ರಕ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬಸ್ ಹಾಗು ಟ್ರಕ್ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು, ಗಾಯಗೊಂಡಿದ್ದ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಯತ್ನಿಸಿದರೂ ಅಷ್ಟರಲ್ಲಾಗಲೇ ಎರಡು ವಾಹನಗಳೂ ಸುಟ್ಟು ಕರಕಲಾಗಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...