alex Certify
ಕನ್ನಡ ದುನಿಯಾ       Mobile App
       

Kannada Duniya

ಲೇಡಿಸ್ ಟಾಯ್ಲೆಟ್ ನಲ್ಲಿತ್ತು 5 ತಿಂಗಳ ಭ್ರೂಣ..!

Representational Image 22334ಖಾಸಗಿ ಆಸ್ಪತ್ರೆಯೊಂದರ ಲೇಡಿಸ್ ಟಾಯ್ಲೆಟ್ ನಲ್ಲಿ 5 ತಿಂಗಳ ಭ್ರೂಣ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆಸ್ಪತ್ರೆಯ ಹೊರ ಆವರಣದಲ್ಲಿ ಅಳವಡಿಸಿರುವ ಸಿಸಿ ಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿದ್ದಾರೆ.

ದೆಹಲಿಯ ಜಫರ್ಪುರ್ ಕಲನ್ ಏರಿಯಾದಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಘಟನೆ ಬೆಳಕಿಗೆ ಬಂದಿದ್ದು, ಆಸ್ಪತ್ರೆ ಸಿಬ್ಬಂದಿ ಕೂಡಲೇ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಪೊಲೀಸರು, ಭ್ರೂಣವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದು, ಇದು ಗಂಡು ಶಿಶುವಿನ ಭ್ರೂಣವೆಂಬುದು ತಿಳಿದುಬಂದಿದೆ. ಆಸ್ಪತ್ರೆ ಸಿಬ್ಬಂದಿಯ ವಿಚಾರಣೆ ನಡೆಸಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿ ಕೃತ್ಯವೆಸಗಿದವರ ಪತ್ತೆಗೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...