alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಸೈನಿಕರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

indian-army-keeping-vigil-borderಭಾರತದ ವಿರುದ್ದ ಭಯೋತ್ಪಾದಕರನ್ನು ಎತ್ತಿ ಕಟ್ಟುತ್ತಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೈನಿಕರು ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಗಡಿ ನಿಯಂತ್ರಣ ರೇಖೆ ಬಳಿಯ ಬಟಾರ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಕಾರಣಕ್ಕೆ ಐದು ಮಂದಿ ಪಾಕ್ ಸೈನಿಕರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ.

ಇಂದು ಬೆಳಿಗ್ಗೆಯಷ್ಟೇ ಭಾರತೀಯ ಸೈನಿಕರು, ಬಾರಾಮುಲ್ಲಾ ಜಿಲ್ಲೆಯ ಸೋಪೂರ್ ನಲ್ಲಿ ಎನ್ ಕೌಂಟರ್ ನಡೆಸಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಬಶ್ರತ್ ಅಹ್ಮದ್ ಶೇಖ್ ಹಾಗೂ ಇಜಾಜ್ ಮೀರ್ ಎಂಬ ಭಯೋತ್ಪಾದಕರನ್ನು ಎನ್ ಕೌಂಟರ್ ಮಾಡಿದ್ದರು.

ಈಗ ಗಡಿ ನಿಯಂತ್ರಣ ರೇಖೆ ಬಳಿ ಬಾಲ ಬಿಚ್ಚಿದ ಪಾಕ್ ಸೈನಿಕರನ್ನು ಹೊಡೆದುರುಳಿಸಲಾಗಿದೆ. ಅಲ್ಲದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಸಕ್ರಿಯವಾಗಿರುವ ಉಗ್ರರ ಹಿಟ್ ಲಿಸ್ಟ್ ತಯಾರಿಸಿರುವ ಸೇನೆ, ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದ್ದು, ಉಗ್ರರನ್ನು ಸದೆ ಬಡಿಯುವ ಕಾರ್ಯ ಮುಂದುವರೆಸಿದೆ. ಕಲ್ಲು ತೂರಾಟಕ್ಕೆ ಪ್ರಚೋದನೆ ನೀಡುವ, ವಿಧ್ವಂಸಕ್ಕೆ ಕೃತ್ಯಕ್ಕೆ ಸಂಚು ರೂಪಿಸಿರುವ 91 ಉಗ್ರರ ಪಟ್ಟಿಯನ್ನು ಸೇನೆ ಸಿದ್ಧಪಡಿಸಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...