alex Certify
ಕನ್ನಡ ದುನಿಯಾ       Mobile App
       

Kannada Duniya

ಡೆಡ್ಲಿ ಆಕ್ಸಿಡೆಂಟ್! 6 ಕುಸ್ತಿಪಟುಗಳು ಸ್ಥಳದಲ್ಲೇ ಸಾವು….

ಸಾಂಗ್ಲಿ: ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯಲ್ಲಿ ನಡೆದ ಭೀಕರ ಅಪಘಾತದಲ್ಲಿ 5 ಮಂದಿ ಕುಸ್ತಿಪಟುಗಳು ಸೇರಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಾಂಗ್ಲಿ ಜಿಲ್ಲೆಯ ಕಡೇಗಾಂವ್ ತಾಲ್ಲೂಕಿನ ವಾಂಗಿ ಗ್ರಾಮದ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಸ್ಥಳದಲ್ಲೇ 6 ಮಂದಿ ಸಾವನ್ನಪ್ಪಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸತಾರಾದಲ್ಲಿ ಕುಸ್ತಿ ಪಂದ್ಯಾವಳಿ ಮುಗಿಸಿಕೊಂಡು ಕ್ರೂಸರ್ ನಲ್ಲಿ ಊರಿಗೆ ವಾಪಸ್ ಆಗುವಾಗ, ಚಾಲಕನ ನಿಯಂತ್ರಣ ತಪ್ಪಿದ ವಾಹನ ಎದುರಿನಿಂದ ಬರುತ್ತಿದ್ದ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕುಸ್ತಿಪಟುಗಳು ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಗೆ ಕ್ರೂಸರ್ ಸಂಪೂರ್ಣ ನಜ್ಜುಗುಜ್ಜಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...