alex Certify
ಕನ್ನಡ ದುನಿಯಾ       Mobile App
       

Kannada Duniya

ಕಟ್ಟಡ ಕುಸಿತಕ್ಕೆ ಆರು ಮಂದಿ ಬಲಿ

building-collapse-in-kanpur-pc-htಕಾನ್ಪುರದ ಕೋಲ್ಡ್ ಸ್ಟೋರೇಜ್ ಘಟಕವೊಂದರಲ್ಲಿ ಗ್ಯಾಸ್ ಸೋರಿಕೆಯಾಗಿ ಸ್ಪೋಟ ಸಂಭವಿಸಿದ ಕಾರಣ ಕಟ್ಟಡ ಕುಸಿದು ಆರು ಮಂದಿ ಮೃತಪಟ್ಟಿದ್ದಾರಲ್ಲದೇ 20 ಕ್ಕೂ ಅಧಿಕ ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದ್ದು, ಅವರನ್ನು ರಕ್ಷಿಸಲು ಕಾರ್ಯಾಚರಣೆ ನಡೆದಿದೆ.

ಕಾನ್ಪುರದ ಶಿವರಾಜ್ಪುರ ಏರಿಯಾದಲ್ಲಿರುವ ಖತ್ರಿಯಾ ಕೋಲ್ಡ್ ಸ್ಪೋರೇಜ್ ಘಟಕದಲ್ಲಿ ಬುಧವಾರ ಮಧ್ಯಾಹ್ನ ಗ್ಯಾಸ್ ಸೋರಿಕೆಯಾಗಿದ್ದು, ಕೆಲ ಹೊತ್ತಿನಲ್ಲೇ ಭಾರೀ ಸ್ಪೋಟ ಉಂಟಾಗಿದೆ. ಇದರ ತೀವ್ರತೆಗೆ ಕಳೆದ ವರ್ಷವಷ್ಟೇ ನಿರ್ಮಾಣಗೊಂಡಿದ್ದ ಕಟ್ಟಡ ಕುಸಿದು ಬಿದ್ದಿದೆ.

ಕೂಡಲೇ ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಆರು ಮಂದಿ ಮೃತಪಟ್ಟಿದ್ದು, 13 ಮಂದಿಯನ್ನು ರಕ್ಷಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವಶೇಷಗಳಡಿ 20 ಕ್ಕೂ ಅಧಿಕ ಮಂದಿ ಸಿಲುಕಿರಬಹುದೆಂದು ಶಂಕಿಸಲಾಗಿದೆ. ಅವರುಗಳ ರಕ್ಷಣೆಗೆ ಕಾರ್ಯಾಚರಣೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...