alex Certify
ಕನ್ನಡ ದುನಿಯಾ       Mobile App
       

Kannada Duniya

ಉಗ್ರರ ದಾಳಿಗೆ 6 ಪೊಲೀಸರು ಹುತಾತ್ಮ

police-dali-teror

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, 6 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಅಚಾಬಲ್ ನಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ 6 ಪೊಲೀಸರು ಹುತಾತ್ಮರಾಗಿ, ಕೆಲವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಠಾಣಾಧಿಕಾರಿ ಸೇರಿ 6 ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸುಮಾರು 10 -15 ಮಂದಿ ಉಗ್ರರು ದಾಳಿ ಮಾಡಿ ಪರಾರಿಯಾಗಿದ್ದು, ಸೇನೆ ಮತ್ತು ಪೊಲೀಸರು ಉಗ್ರರನ್ನು ಸದೆ ಬಡಿಯಲು ಶೋಧ ಕಾರ್ಯ ನಡೆಸಿದ್ದಾರೆ.

ಕೆಲವು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗಿದೆ. ಉಗ್ರರನ್ನು ಮಟ್ಟಹಾಕಲು ಸೇನೆ, ಕಾರ್ಯಾಚರಣೆಯನ್ನು ಮುಂದುವರೆಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...