alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆ ಮಂಟಪದಲ್ಲೇ ವೃದ್ಧ ನೇಣಿಗೆ ಶರಣು

ಮದುವೆ ಮಂಟಪದ ಕಬ್ಬಿಣದ ಗೇಟ್ ಗೆ ವೃದ್ಧನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.

ಮೃತ ವೃದ್ಧನನ್ನು ಲಾನು ಸೈನಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಯ ಸ್ಥಳ ಪರಿಶೀಲಿಸಿದ ಪೊಲೀಸರು ತನಿಖೆ ನಡೆಸಿದ್ದಾರೆ. ವೃದ್ಧ ತನ್ನ ಮಡದಿಯನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬರುತ್ತಿದ್ದ. ಪತ್ನಿ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದಳು.

ಮರಣೋತ್ತರ ಪರೀಕ್ಷೆಯ ಬಳಿಕ ಶವವನ್ನು ಕುಟುಂಬಸ್ಥರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ. ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ಇನ್ನು ಬಹಿರಂಗವಾಗಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...